ಹಿಂ.ವರ್ಗಗಳ ಆಯೋಗ ರಿಮೋಟ್‌ ಕಂಟ್ರೋಲ್‌ ಬೇರೆ ಇದೆ: ಛಲವಾದಿ ನಾರಾಯಣಸ್ವಾಮಿ

Published : Sep 25, 2025, 12:48 AM IST
Chalavadi Narayanaswamy

ಸಾರಾಂಶ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಅಲ್ಲಿರುವವರೇ ನಡೆಸುತ್ತಿಲ್ಲ. ಈ ಆಯೋಗದ ರಿಮೋಟ್‌ ಕಂಟ್ರೋಲ್‌ ಬೇರೆಲ್ಲೋ ಇದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರು (ಸೆ.25): ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಅಲ್ಲಿರುವವರೇ ನಡೆಸುತ್ತಿಲ್ಲ. ಈ ಆಯೋಗದ ರಿಮೋಟ್‌ ಕಂಟ್ರೋಲ್‌ ಬೇರೆಲ್ಲೋ ಇದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾಜಿ, ಶೈಕ್ಷಣಿಕ ಸಮೀಕ್ಷೆ ಸಂಬಂಧ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್‌ ನೀಡಿರುವುದನ್ನು ರದ್ದು ಮಾಡಬೇಕು. ಈಗಾಗಲೇ ಸಮೀಕ್ಷೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡಾಗಿದೆ. ಇದು ಹಿಂದುತ್ವ ವಿರೋಧಿ ನೀತಿ ಎಂದು ಆರೋಪಿಸಿದರು.

ಸಮೀಕ್ಷೆಯ ಗೊಂದಲ ಪರಿಹರಿಸಲು ಕೋರಿ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು. ಈ ಸಂಬಂಧ ಪ್ರಭಾವಿ ಸಮುದಾಯಗಳು ಹೋರಾಟಕ್ಕೆ ಇಳಿದಾಗ ಅವುಗಳನ್ನು ಕಾಣದಂತೆ ಮಾಡಿದ್ದಾರೆ. ಆದರೆ, ಪರಿಶಿಷ್ಟ ಜಾತಿ, ವರ್ಗಗಳದು ಹೈಡ್ ಮಾಡಿಲ್ಲ. ಇದರಿಂದ ಗೊಂದಲವಾಗಿದೆ ಎಂದು ಕಿಡಿಕಾರಿದರು.

ದಲಿತರೆಂದು ಪರಿಗಣಿಸಲಾಗುವುದಿಲ್ಲ

ಕ್ರೈಸ್ತರಾಗಿ ಮತಾಂತರ ಹೊಂದಿದವರ ಮೂಲಜಾತಿ ಹಾಗೇ ಉಳಿಯುತ್ತದೆ ಎಂದು ಹೇಳಿದ್ದಾರೆ. ಅದು ಉಳಿಯಲು ಹೇಗೆ ಸಾಧ್ಯ? ಮೂಲಜಾತಿಯಲ್ಲೇ ಮೀಸಲಾತಿ ಕೊಡಬೇಕೇ ಎಂದು ತೀರ್ಮಾನ ಮಾಡುತ್ತಾರಂತೆ. ನ್ಯಾಯಾಲಯವೇ ತೀರ್ಮಾನಿಸಿರುವಾಗ ಮತ್ತೆ ತೀರ್ಮಾನಿಸಲು ಇವರು ಯಾರು? ದಲಿತರು ಕ್ರೈಸ್ತರಾಗಿ ಸೇರಿದರೆ ಅವರನ್ನು ದಲಿತರೆಂದು ಪರಿಗಣಿಸಲಾಗುವುದಿಲ್ಲ. ಇಲ್ಲಿ ಗೊಂದಲವಿದೆ ಎಂದು ಹೇಳಿದರು.

ಸದಾಶಿವ ಆಯೋಗ, ನಾಗಮೋಹನ್ ದಾಸ್ ಆಯೋಗ, ಕಾಂತರಾಜು ಆಯೋಗ, ಜಯಪ್ರಕಾಶ್ ಹೆಗ್ಡೆ ಆಯೋಗದಲ್ಲಿ ಪರಿಶಿಷ್ಟ ಜಾತಿಗೆ ಕ್ರಿಶ್ಚಿಯನ್ ಪದ ಇರಲಿಲ್ಲ. ಈಗ ಎಲ್ಲಿಂದ ಯಾಕೆ ಹುಟ್ಟಿದೆ? ಈ ಬಗ್ಗೆ ಇಂದೇ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುವುದಾಗಿ ಆಯೋಗದ ಅಧ್ಯಕ್ಷರು ಹೇಳಿದ್ದಾರೆ. ಇವತ್ತೇ ತೀರ್ಮಾನ ಆಗದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಆಯೋಗವೇ ಹೊಣೆ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿಕಾರ ಶಾಶ್ವತವಲ್ಲ: ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?
ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?