ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯನ್ನು ನೇಮಿಸಿದ ಬಿಜೆಪಿ

By Suvarna NewsFirst Published Sep 28, 2021, 4:33 PM IST
Highlights

* ಹಾನಗಲ್​​ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಡೇಟ್ ಫಿಕ್ಸ್
* ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯನ್ನು ನೇಮಿಸಿದ ಬಿಜೆಪಿ
* ಇದೇ ಅಕ್ಟೋಬರ್​ 30ರಂದು ಎರಡು ಕ್ಷೇತ್ರಗಳಿಗೆ ಉಪಚುನಾವಣೆ

ಬೆಂಗಳೂರು, (ಸೆ.28): ಹಾನಗಲ್​​ ಹಾಗೂ ಸಿಂದಗಿ (Sindagi) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (By Election) ದಿನಾಂಕ ಘೋಷಣೆಯಾಗಿದ್ದು, ಇದೇ ಅಕ್ಟೋಬರ್​ 30ರಂದು ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ(BJP), ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಉಸ್ತುವಾರಿಯನ್ನ ನೇಮಿಸಿದೆ. ಪರಿಷತ್ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ (Laxman Savadi) ಅವರನ್ನ ಉಸ್ತುವಾರಿಯಾಗಿ ಮಾಡಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ಬಿಜೆಪಿ ಇಂದು (ಸೆ.28) ಸಂಜೆಯೊಳಗೆ ಉಸ್ತುವಾರಿಯನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಸಿಂದಗಿ ವಿಧಾನಸಭೆ ಬೈ ಎಲೆಕ್ಷನ್​ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್​

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ ಸವದಿ, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ನಾನು ಬಿಜೆಪಿಯ ಉಸ್ತುವಾರಿ. ನಾನು ಬಿಜೆಪಿಯಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ಉಪ-ಚುನಾವಣೆಯನ್ನು ಎದುರಿಸುತ್ತೇನೆ. ಆದ್ರೆ, ನಾನು ಅಭ್ಯರ್ಥಿಯಾಗುವುದಿಲ್ಲ ಎಂದರು.

ಈ ಮೂಲಕ ಸಿಂದಗಿ ಉಪಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಊಹಾಪೋಹಗಳಿಗೆ ಸವದಿ ತೆರೆ ಎಳೆದಿದ್ದು, ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.

click me!