* ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು
* ಇತ್ತ ಮಹತ್ವದ ಸಭೆ ಕರೆದ ರಾಜ್ಯ ಬಿಜೆಪಿ
* ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆ
ಚಿತ್ರದುರ್ಗ, (ಜು.21): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಬದಲಾಯಿಸಲಾಗುತ್ತದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.
ಇದರ ಮಧ್ಯೆ ರಾಜ್ಯ ಬಿಜೆಪಿ ಮಹತ್ವದ ಸಭೆಯೊಂದನ್ನು ಕರೆದಿರುವುದು ಭಾರೀ ಕುತೂಹಲ ಮೂಡಿಸಿದೆ. ಜು. 24ರಂದು ರಾಜ್ಯ ಬಿಜೆಪಿ ಸಭೆ ಕರೆದಿರುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಶಾಸಕಾಂಗ ಸಭೆ ರದ್ದಾದ ಬೆನ್ನಲ್ಲೇ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ
ಈ ಬಗ್ಗೆ ಚಿತ್ರದುರ್ಗದಲ್ಲಿ ಇಂದು (ಬುಧವಾರ) ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳ 24 ರಂದು ಇಂಡಿಯನ್ ಇಂಟರ್‌ನ್ಯಾಷನಲ್ ಕಾಲೇಜಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕುರಿತು ಹಾಗೂ ಪಕ್ಷದ ಮುಂದಿನ ರೂಪುರೇಷಗಳ ಬಗ್ಗರ ಚರ್ಚ ನಡೆಯಲಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತು ಕೂಡಾ ಮಾತುಕತೆ ನಡೆಯಲಿದೆ ಎಂದು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬೂತ್ ಅಧ್ಯಕ್ಷರು ಆಯೋಜಿಸುವಂತೆ ಮಾಡುತ್ತೇವೆ. ರಾಜ್ಯದಲ್ಲಿ 30 ಮನ್ ಕೀ ಬಾತ್ ಕಾರ್ಯಕ್ರಮ ನಡೆಯಲಿವೆ. ಸೆಪ್ಟಂಬರ್ 1ರಿಂದ 15 ಗ್ರಾ.ಪಂ ಸದಸ್ಯರ ಜಿಲ್ಲಾ ಸಮಾವೇಶ ನಡೆಸುತ್ತೇವೆ. ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ರಾಜ್ಯ ಮಟ್ಟದ ಸಮಾವೇಶ ನಡೆಸುತ್ತೇವೆ ಎಂದು ವಿವರಿಸಿದರು.