* 2,500 ಕೋಟಿ ರೂ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಗ್ ಶಾಕ್
* ಪದೇ-ಪದೇ ಸ್ವಪಕ್ಷದ ನಾಯಕರ ವಿರುದ್ಧ ಗುಡುಗುತ್ತಿರುವ ಯತ್ನಾಳ್‌ಗೆ ಈ ಬಾರಿ ಶಿಕ್ಷೆ ಫಿಕ್ಸ್?
* ಯತ್ನಾಳ್ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರ
ಬೆಂಗಳೂರು, (ಮೇ.07): ಪಿಎಸ್‌ಐ ನೇಮಕಾತಿ ಹಗರಣ, ಕಾಮಗಾರಿಗಳಲ್ಲಿ ಶೇ. 40 ಪರ್ಸೆಂಟ್ ಕಮಿಷನ್ ದಂಧೆ ಆರೋಪಗಳ ನಡುವೆ 'ಸಿಎಂ ಆಗಲು 2,500 ಕೋಟಿ ರೂ., ಸಚಿವರಾಗಲು 100 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದಿಲ್ಲಿಯಿಂದ ಬಂದಿದ್ದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ.
ಈ ಹಿನ್ನಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ (BJP) ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಲಾಗಿದೆ. ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಲಾಗಿದೆ.
undefined
ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ
ರಾಜ್ಯ ಸಮಿತಿ, ಯತ್ನಾಳ್ ಅವರನ್ನು ಸಂಪರ್ಕ ಮಾಡಲು ಪ್ರಯತ್ನಿಸಿದೆ. ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿವರಣೆ ಪಡೆಯಲು ಸಮಿತಿ ಯತ್ನಿಸಿದೆ. ಆದರೆ ಶಾಸಕರು ದೂರವಾಣಿ ಕರೆಯನ್ನು ಸ್ವೀಕರಿಸಿಲ್ಲ. ಇಂದು (ಮೇ 7) ಸಂಜೆ ವೇಳೆಗೆ ಕೇಂದ್ರ ಶಿಸ್ತು ಸಮಿತಿ ಕ್ರಮದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ನಾನಾ ಆರೋಪ ವಿಚಾರಗಳನ್ನಿಟ್ಟುಕೊಂಡು ಪ್ರತಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಿದ್ದು, ಅದರಿಂದ ಪಾರಾಗಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿ ಜನರ ವಿಶ್ವಾಸ ಗಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಈ ಹೊತ್ತಿನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಿಜೆಪಿ ನಾಯಕರಿಗೆ ಇರುಸು ಮುರುಸು ಉಂಟು ಮಾಡಿದ್ದು, ಅವರ ವಿರುದ್ಧ ಶಿಸ್ತು ಕ್ರಮದ ಮಾತು ಕೇಳಿಬರಲಾರಂಭಿಸಿದೆ.
ನಾಯಕತ್ವ, ಸಂಪುಟ ವಿಸ್ತರಣೆ- ಪುನಾರಚನೆ, ನಾನಾ ಇಲಾಖೆ ನೇಮಕಾತಿ ವಿಚಾರವಾಗಿ ಹೇಳಿಕೆಗಳ ಮೂಲಕವೇ ಚರ್ಚೆಯಲ್ಲಿರುವ ಯತ್ನಾಳ್ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಪಕ್ಷದ ವಲಯದಲ್ಲಿ ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಪದೇ ಪದೆ ಆಧಾರರಹಿತ ಆರೋಪಗಳನ್ನು ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದಾರೆ. ಆದ್ರೆ, ಇದುವರೆಗ ಪಕ್ಷ ಯಾವುದೇ ನೋಟಿಸ್ ನೀಡಿಲ್ಲ.
ಈ ಬಾರಿ ಖೆಡ್ಡಾಕ್ಕೆ ಬೀಳ್ತಾರಾ ಯತ್ನಾಳ್?
ಯೆಸ್...ಪದೇ-ಪದೇ ಯಡಿಯೂರಪ್ಪ ಸೇರಿದಂತೆ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿಯೇ ಒಂದಿಲ್ಲೊಂದು ಆರೋಪ ಮಾಡುತ್ತಲ್ಲೇ ಇದ್ದಾರೆ. ಇದೀಗ ಸಿಎಂ ಕುರ್ಚಿಗೆ 2300 ಕೋಟಿ ರೂ ಕೊಡಿ ಎಂದು ಪರೋಕ್ಷವಾಗಿ ಕೇಂದ್ರ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದನ್ಉ ಬಿಜೆಪಿ ಬಹಳ ಗಂಭೀರವಾಗಿ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಈ ಬಾರಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಠಿಣ ಕ್ರಮಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ವಿಧಾನಸಭೆ ಚುನಾವಣೆ ಕೇವಲ ಒಂದು ವರ್ಷ ಬಾಕಿ ಇರುವುದರಿಂದ ಖಡಕ್ ಕೊನೆಯ ಎಚ್ಚರಿಕೆ ನೀಡಬಹುದು. ಇಲ್ಲ ಅಂದ್ರೆ ಈ ಬಾರಿಯೂ ಸಚಿವ ನೀಡದೇ ಇರಬಹುದು.
ಯತ್ನಾಳ್ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಲ್ಲಾ ನೇಮಕಾತಿಗಳಲ್ಲೂ ಸಹ ಒಂದೊಂದು ರೇಟ್ ಫಿಕ್ಸ್ ಆಗಿದೆ. ಶಾಸಕ ಬಸನಗೌಡ ಯತ್ನಾಳ್ರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಯತ್ನಾಳ್ರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾಗಿಯಾಗಿದ್ದಾರೆ. ಕಟೀಲು ಇದನ್ನ ಮುಚ್ಚೋಕೆ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಮಂತ್ರಿ ಇದರಲ್ಲಿ ಭಾಗಿಯಾಗಿದ್ರೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಯತ್ನಾಳ್ ಮಾಡಿರುವುದು ಬಹಳ ದೊಡ್ಡ ಗಂಭೀರ ಆರೋಪ. 2,500 ಕೋಟಿ ರೂ. ಸಿಎಂ ಖುರ್ಚಿಗೆ ಕೇಳಿದ್ದಾರೆ ಎನ್ನುವ ಅರೋಪ ಮಾಡಿದ್ದಾರೆ. ನನ್ನ ನಲವತ್ತು ವರ್ಷ ಜೀವನದಲ್ಲಿ ಈ ರೀತಿ ಆರೋಪ ಕೇಳಿರಲಿಲ್ಲ. ಇದು ಅತಿ ದೊಡ್ಡ ಸ್ಫೋಟಕ ಸುದ್ದಿ ಎಂದು ಶಿವಕುಮಾರ್ ಆರೋಪಿಸಿದ್ದಾರೆ.