
ಬೆಂಗಳೂರು, (ಮಾ.16): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಪ್ರಕರಣದ ಹಿಂದೆ ಮಹಾನ್ ನಾಯಕರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದ್ದು, ಆ ಮಹಾನ್ ನಾಯಕ ಯಾರು ಎನ್ನುವ ಚರ್ಚೆ ಶುರುವಾಗಿದೆ.
ಈ ಬಗ್ಗೆ ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾಲೆಳೆಯಲಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ಸಮರದ ಕಾವು ಮತ್ತಷ್ಟು ಏರಿದೆ.
'ಸೆಕ್ಸ್ CD ಕೇಸ್:ಯಡಿಯೂರಪ್ಪನವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ'?
'ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ'. ಎಂದು ಬಿಜೆಪಿಯ ಅಧಿಕೃತ ಅಕೌಂಟ್ನಲ್ಲಿ ಟ್ವೀಟ್ ಮಾಡಲಾಗಿದೆ.
ಈ ಟ್ವೀಟ್ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಗಳನ್ನು ಲಗತ್ತಿಸಲಾಗಿದ್ದು, ಮಹಾನಾಯಕ ಹಾಗೂ ಮಹಾನಾಯಕಿ ಎಂದು ಇಬ್ಬರೆಡೆಗೂ ಬೊಟ್ಟು ಮಾಡಿದಂತಾಗಿದೆ.
ಇತ್ತ ಕಾಂಗ್ರೆಸ್ ಪಕ್ಷದವರು ಸಹ ತಮ್ಮ ಟ್ವಿಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಒಂದರ ಹಿಂದೊಂದು ಟ್ವೀಟ್ ಮಾಡುತ್ತಿದ್ದು, 'ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ವಾಮ ಮಾರ್ಗದ ಸರ್ಕಾರ. ನಿಮ್ಮವರೇ ಹೇಳಿದಂತೆ ಬ್ಲಾಕ್ಮೇಲ್ ಸಂಪುಟ. ಹನಿಟ್ರಾಪ್ ಮೂಲಕ ಆಪರೇಷನ್ ಕಮಲ. ಯತ್ನಾಳ್ ಹೇಳಿದಂತೆ ಬಿಎಸ್ವೈ ಫ್ಯಾಮಿಲಿ ಸರ್ಕಾರ. 'ದಂಡ'ದ ಸರ್ಕಾರಕ್ಕೆ 'ಮಾನ' ಎಲ್ಲಿದೆ? ತಾಕತ್ತಿದ್ದರೆ ಆಪರೇಷನ್ ಕಮಲದ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ'. ಎಂದು ಬಿಜೆಪಿಗೆ ತಿರುಗೇಟು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.