Karnataka MLC Poll ಕರ್ನಾಟಕದಲ್ಲಿ ಮತ್ತೆ ಚುನಾವಣೆ, ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

By Suvarna News  |  First Published Feb 6, 2022, 5:13 PM IST

* ಕರ್ನಾಟಕದಲ್ಲಿ ಮತ್ತೆ ವಿಧಾನಪರಿಷತ್ ಚುನಾವಣೆ
 * ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ
* ಜೂನ್ ಇಲ್ಲವೇ ಜುಲೈ ತಿಂಗಳ ಮಧ್ಯ ಭಾಗದಲ್ಲಿ  ಚುನಾವಣೆ ನಡೆಯುವ ಸಾಧ್ಯತೆ


ಬೆಂಗಳೂರು, (ಫೆ.06): ಕರ್ನಾಟಕದ 4 ವಿಧಾನಪರಿಷತ್ (Karnataka Legislative Council Election) ಸ್ಥಾನಗಳಿಗೆ  ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ.  

  2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರ ಒಟ್ಟು ನಾಲ್ಕು ಸ್ಥಾನಗಳಿಗೆ ,  ಜೂನ್ ಇಲ್ಲವೇ ಜುಲೈ ತಿಂಗಳ ಮಧ್ಯ ಭಾಗದಲ್ಲಿ  ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ.

Tap to resize

Latest Videos

ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಅರುಣ್ ಶಹಾಪುರ್ ಅವರಿಗೆ ಟಿಕೆಟ್ ದೊರೆಯುವ ನಿರೀಕ್ಷೆಗಳಿವೆ.  

TP, ZP Election: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಯಾವಾಗ? ಸುಳಿವು ಕೊಟ್ಟ ಈಶ್ವರಪ್ಪ

ಇನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.‌ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್​ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇತ್ತ ಕಾಂಗ್ರೆಸ್​ನಲ್ಲಿ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೊರಟ್ಟಿ ಮತ್ತೆ ನಿಲ್ಲುತ್ತಾರಾ?
 ಪರಿಷತ್ ಸಭಾಪತಿ ಅವರ  ಸದಸ್ಯತ್ವ ಅವಧಿ ಜೂನ್ ವೇಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಪರಿಷತ್ ಚುನಾವಣೆ ಅಖಾಡಕ್ಕಿಳಿಯುತ್ತಾರಾ ಅಥವಾ ಇಲ್ಲಿ ರಾಜಕೀಯಕ್ಕೆ ವಿರಾಮ ಹೇಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ. ಈ ಬಗ್ಗೆ ಇನ್ನು ಅವರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಬಸವರಾಜ ಹೊರಟ್ಟಿ ಅವರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುತ್ತಾ ಬಂದಿದ್ದಾರೆ.

ಹೊರಟ್ಟಿಗೆ ಬಿಜೆಪಿ ಮೇಲೆ ಒಲವು? 
ಪ್ರಮುಖವಾಗಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ  ಚುನಾವಣೆಗೆ ಸ್ಪರ್ಧೆಸಲು ಒಲವು ತೋರಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಆದ್ರೆ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಬಲವಾಗಿ ಕೇಳಿಬರುತ್ತಿದೆ.

ಹೊರಟ್ಟಿಗೆ 75 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ಅವರಿಗೆ ವಯಸ್ಸಿನ ಅಡ್ಡಿಯಾಗಿದೆ ಎನ್ನಲಾಗಿದೆ. ಈ ಕುರಿತು ಕೆಲ ಬಿಜೆಪಿಗರು ವರಿಷ್ಠರ ಗಮನಕ್ಕೆ ತಂದಿದ್ದರು ಎನ್ನಲಾಗಿದ್ದು, ಹೀಗಾಗಿ ಹೊರಟ್ಟಿ ಬಿಜೆಪಿ ಸೇರಿದರೂ ಟಿಕೆಟ್​ ನಿರಾಕರಿಸುವ ಸಾಧ್ಯತೆ ಇದೆ. ಇದು ಖಚಿತ ಮಾಹಿತಿ ಅಲ್ಲ. ಆದ್ರೆ, ರಾಜ್ಯ ರಾಜಕಾರಣದಲ್ಲಿ ಅಂತೆ-ಕಂತೆ ಮಾತುಗಳು ಕೇಳಿಬರುತ್ತಿವೆ.

ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ TP, ZP
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ (Zilla, Taluk Panchayat Election) ಈಗಾಗಲೇ ಮುಗಿದು ಹಳೆಯದಾಗಿರಬೇಕಿತ್ತು. ಆದ್ರೆ, ಕೊರೋನಾ ಈತಿಯಿಂದ TP, ZP ಎಲೆಕ್ಷನ್ ಮಾಡಲು ಆಗುತ್ತಿಲ್ಲ. ಇದೇ ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆಗಳು ಹೆಚ್ಚಿವೆ..

click me!