ಬಿಜೆಪಿ ಮಾಜಿ ಶಾಸಕ ಸಿ. ಗುರುಸ್ವಾಮಿ ಕೊರೋನಾಗೆ ಬಲಿ!

By Suvarna News  |  First Published Aug 19, 2020, 9:57 AM IST

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ. ಗುರುಸ್ವಾಮಿ ನಿಧನ| ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ| ಕೋವಿಡ್ ದೃಢಪಟ್ಟಿದ್ದರಿಂದಾಗಿ ಆಗಸ್ಟ್ 5 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ


ಚಾಮರಾಜನಗರ(ಆ.19): ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ. ಗುರುಸ್ವಾಮಿ (68)ಕೊರೋನಾ ಸೋಂಕಿನಿಂದ ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋವಿಡ್ ದೃಢಪಟ್ಟಿದ್ದರಿಂದಾಗಿ ಆಗಸ್ಟ್ 5 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸುಮಾರು ಬೆಳಿಗ್ಗೆ 7 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

Tap to resize

Latest Videos

66 ಲಕ್ಷ ಜನಸಂಖ್ಯೆಯ ಪುಣೆಯ ಅರ್ಧಕ್ಕರ್ಧ ಜನರಲ್ಲಿ ಕೊರೋನಾ ಪ್ರತಿಕಾಯ ಪತ್ತೆ!

ವೃತ್ತಿಯಲ್ಲಿ ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ ರಾಜಶೇಖರಮೂರ್ತಿಯವರ ಶಿಷ್ಯರಾಗಿದ್ದರು. ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಜೀವನ ಆರಂಭಿಸಿದ್ದರು. ರಾಜಶೇಖರಮೂರ್ತಿಯವರು ಬಿಜೆಪಿ ಸೇರಿದ ಸಂದರ್ಭದಲ್ಲಿ  ಗುರುಸ್ವಾಮಿ ಅವರೂ ಬಿಜೆಪಿ ಸೇರಿದರು.

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬಿಜೆಪಿಯ ಮೊದಲ‌ ಶಾಸಕ

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಏಕೈಕ ಬಿಜೆಪಿ ಶಾಸಕರಾಗಿದ್ದರು. 1999ರಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರುಸ್ವಾಮಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದರು.

click me!