
ಬಾಗಲಕೋಟೆ(ಜು.23): ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ವೇಳೆ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿಯ ಹತ್ತು ಶಾಸಕರನ್ನು ಅಮಾನತ್ತುಗೊಳಿಸುವುದರ ಹಿಂದೆ ಕಾಂಗ್ರೆಸ್ ಸರ್ವಾಧಿಕಾರಿ, ಸಂವಿಧಾನ ವಿರೋಧಿ ಧೋರಣೆ ಪ್ರದರ್ಶಿಸಿದೆ ಎಂದು ಆರೋಪಿಸಿದರು.
ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಉಚಿತ ಯೋಜನೆಗಳ ಜಾರಿ ಉದ್ದೇಶಕ್ಕೆ ಕಾಂಗ್ರೆಸ್ ಸರ್ಕಾರ, ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ರದ್ದುಪಡಿಸಿದೆ. ಬಡವರು, ಹಿಂದುಳಿದವರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ಸೌಲಭ್ಯಗಳನ್ನು ಕಸಿದುಕೊಂಡಿದೆ. ಇಂತಹ ಕಾಂಗ್ರೆಸ್ ಸರ್ಕಾÜದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸಪೋರ್ಟ್ ಇದೆ: ಸಚಿವ ಆರ್.ಬಿ.ತಿಮ್ಮಾಪುರ
ಬೆಂಗಳೂರಿನಲ್ಲಿ ನಡೆದ ದೇಶದ ವಿರೋಧ ಪಕ್ಷಗಳ ನಾಯಕರ ಸಭೆಗೆ ಆಗಮಿಸಿದ್ದ ವಿವಿಧ ಪಕ್ಷಗಳ ನಾಯಕರನ್ನು ಸ್ವಾಗತಿಸುವ ಜವಾಬ್ದಾರಿಯನ್ನು ರಾಜ್ಯದ 30 ಐಎಎಸ್ ಅಧಿಕಾರಿಗಳಿಗೆ ವಹಿಸಿ ಶಿಷ್ಟಾಚಾರ ಬಳಸಿಕೊಂಡ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿ ನಡೆ ಅನುಸರಿಸಿದೆ ಎಂದು ಖಂಡಿಸಿ ವಿಧಾನಸಭೆ ಅಧಿವೇಶನ ಮುಗಿಯುವವರೆಗೂ ಬಿಜೆಪಿ ಹತ್ತು ಶಾಸಕರನ್ನು ಅಮಾನತು ಮಾಡಿದ ಸಭಾಪತಿ ಯು.ಟಿ.ಖಾದರ್ ನಡೆ ಖಂಡನೀಯ ಎಂದು ಹರಿಹಾಯ್ದರು.
ಉಪ ವಿಭಾಗಾಧಿಕಾರಿಗಳಾದ ಶ್ವೇತಾ ಬಿಡಿಕರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಉಪಾಧ್ಯಕ್ಷ ರಾಜು ರೇವಣಕರ್, ಸತ್ಯನಾರಾಯಣ ಹೇಮಾದ್ರಿ, ಬಸವರಾಜ ಯಂಕಂಚಿ, ಗುಂಡು ಶಿಂಧೆ, ರಾಜು ಮುದೇನೂರ, ಸುರೇಶ ಕೊಣ್ಣೂರ ಸೇರಿದಂತೆ ನಗರಸಭೆ ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಣಿಪುರ, ಜಾರ್ಖಂಡ ಘಟನೆ ಖಂಡನಿಯ
ಮಣಿಪುರ ಹಾಗೂ ಜಾರ್ಖಂಡ ಘಟನೆ ಖಂಡನಿಯ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ದೇಶದಲ್ಲಿ ಪಶ್ಚಿಮ ಬಂಗಾಳ ಘಟನೆ, ಮಣಿಪುರ ಹಾಗೂ ಜಾರ್ಖಂಡ ಘಟನೆ, ರಾಜಸ್ತಾನ ಮತ್ತು ರಾಜ್ಯದಲ್ಲಿ ನಡೆದ ಘಟನೆಗಳು ಎಲ್ಲವೂ ಖಂಡನಿಯವೇ. ಪ್ರಧಾನ ಮಂತ್ರಿ ಸಹ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತವೆ. ಜತೆಗೆ ರಾಜ್ಯದಲ್ಲಿ ಹಾಲಿನ ದರ . 3 ಏರಿಸಿರುವುದು ಅಷ್ಟೇ ಅಲ್ಲ ವಿದ್ಯುತ್ ಬಿಲ್ ಕೂಡಾ ಹೆಚ್ಚಾಗಿದೆ. ಗ್ಯಾರಂಟಿ ಸಲುವಾಗಿ ವಸ್ತುಗಳ ಮೇಲೆ ದರ ಏರಿಸಿರುವುದು ಖಂಡನಿಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.