ಬೆಳಗಾವಿ 'ಲಕ್ಷ್ಮಿ'ಗೆ ನೂರಾರು ಕೋಟಿ ಸಾಲ ಕೊಡಿಸಿದ್ದು ಯಾರು? ಡಿಕೆಶಿfಎ ಸತ್ಯವ್ರತನ ಸೋಗು ಎಂದ ಬಿಜೆಪಿ

Published : May 27, 2022, 11:43 AM IST
ಬೆಳಗಾವಿ 'ಲಕ್ಷ್ಮಿ'ಗೆ ನೂರಾರು ಕೋಟಿ ಸಾಲ ಕೊಡಿಸಿದ್ದು ಯಾರು? ಡಿಕೆಶಿfಎ ಸತ್ಯವ್ರತನ ಸೋಗು ಎಂದ ಬಿಜೆಪಿ

ಸಾರಾಂಶ

* ಡಿಕೆ ಶಿವಕುಮಾರ್‌ಗೆ ತಿರುಗೇಟು ಕೊಟ್ಟ ಬಿಜೆಪಿ * ಸರಣಿ ಟ್ವೀಟ್‌ ಮೂಲಕ ಡಿಕೆಶಿಗೆ ಪ್ರಶ್ನೆ ಮೇಲೆ ಪ್ರಶ್ನೆ * ಇಡಿ ಚಾರ್ಜ್‌ ಶೀಟ್‌ ಸಲ್ಲಿಸಿದ್ದಕ್ಕೆ ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಡಿಕೆಶಿ

ಬೆಂಗಳೂರು, (ಮೇ.27):  ಇಡಿ ಅಧಿಕಾರಿಗಳು ತಮ್ಮ ವಿರುದ್ಧ ಕೋರ್ಟ್‌ಗೆ ಚಾರ್ಜ್‌ ಶೀಟ್ ಸಲ್ಲಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ಕಿಡಿಕಾರಿದ್ರು. ಇದಕ್ಕೆ ಇದೀಗ ಬಿಜೆಪಿ ಸಹ ಡಿಕೆಶಿ ಆರೋಪಗಳಿಗೆ ತಿರುಗೇಟು ನೀಡಿದೆ.

ಕೆಪಿಸಿಸಿಯ ಬೇನಾಮಿ ಅಧ್ಯಕ್ಷೆಯ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ಡಿ.ಕೆ ಶಿವಕುಮಾರ್ ಅವರು ಸಚಿವನಾಗಿದ್ದ ಅವಧಿಯಲ್ಲಿ ನಡೆಸಿದ ಅವ್ಯವಹಾರಗಳ ಬಗ್ಗೆ ಬೆಳಕು ಚೆಲ್ಲಬೇಕೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಳಗಾವಿಯ "ಲಕ್ಷ್ಮಿ"ಗೆ ಮಂಗಳೂರು, ಉತ್ತರ ಕನ್ನಡ ಹಾಗೂ ಇನ್ನಿತರ ಜಿಲ್ಲಾ ಸಹಕಾರ ಬ್ಯಾಂಕ್‌ಗಳಿಂದ ನೂರಾರು ಕೋಟಿ ಸಾಲ ಕೊಡಿಸಿದ್ದು ಯಾರು?

ಬಿಜೆಪಿಗೆ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಲಾಗ್ತಿದ್ಯಾ? ಗಂಭೀರ ಆರೋಪ

ಐಟಿ, ಇಡಿ, ಸಿಬಿಐ ದಾಳಿ ಮಾಡಿದಾಗಲೆಲ್ಲ ಬಿಜೆಪಿ ಮೇಲೆ ಬೊಟ್ಟುಮಾಡುವ ಡಿಕೆಶಿ ಅವರೇ, ಕೆಪಿಸಿಸಿ ಕಚೇರಿಯಲ್ಲೇ ಕಳಿತು ನಿಮ್ಮದೇ ಪಕ್ಷದ ಉಗ್ರಪ್ಪ ಹಾಗೂ ಸಲೀಮ್ ಅವರು ಪಿಸುಮಾತುಗಳನ್ನಾಡಿದ್ದು ಮರೆತಿರಾ? ನ್ಯಾಯಯುತ ಸಂಪಾದನೆ ಮಾಡಿದ್ದರೆ ನಿಮ್ಮ ಮೇಲೆ ಸ್ವಪಕ್ಷೀಯ ನಾಯಕರಿಂದ ಅಪವಾದ ಕೇಳಿ ಬರುತ್ತಿತ್ತೇ? ಕೇಂದ್ರೀಯ ತನಿಖಾ ಸಂಸ್ಥೆಗಳ ತನಿಖೆಯ ಪ್ರತಿ ಹಂತವನ್ನೂ ಬಿಜೆಪಿ ಮೇಲೆ ಹೊರಿಸುವುದೇಕೆ? ನೀವು ಅಕ್ರಮ ಹಣ ಸಂಪಾದಿಸಿದ್ದು ಬಿಜೆಪಿಯನ್ನು ಕೇಳಿಯೇ? ನೀವು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವುದು ಬಿಜೆಪಿ ಒಪ್ಪಿಗೆಯಿಂದಲೇ? ಎಂದು ಪ್ರಶ್ನಿಸಿದೆ.

ಮಾನ್ಯ ಡಿಕೆಶಿ ಅವರೇ, ರಾಜ್ಯದಲ್ಲಿ ಸರ್ಕಾರಿ ಕಾಮಗಾರಿಗಳಿಂದ ದುಡ್ಡು ಹೊಡೆಯುವ ಜಾಲ ಬೆಳೆಸಿದ್ದು ಹಾಗೂ ಪರ್ಸಂಟೇಜ್ ವ್ಯವಹಾರ ಶುರು ಮಾಡಿದ್ದು ನೀವೇ ಎಂಬ ರಹಸ್ಯ ಕೆಪಿಸಿಸಿ ಕಚೇರಿಯಿಂದಲೇ ಹೊರ ಬಂದಿತ್ತು. ಇಷ್ಟೆಲ್ಲಾ ಇರುವಾಗ ನೀವು ಸತ್ಯವ್ರತನ ಸೋಗು ಹಾಕಿದರೆ ರಾಜ್ಯದ ಜನ ನಂಬುತ್ತಾರೆಯೇ? ಎಂದು ಬಿಜೆಪಿ ಟೀಕಿಸಿದೆ.

ಕೆಪಿಸಿಸಿ ರಾಜ್ಯ ಅಧ್ಯಕ್ಷರು ಈಗ ಭ್ರಷ್ಟಾಧ್ಯಕ್ಷ ಎಂದೇ ಕುಖ್ಯಾತರಾಗಿದ್ದಾರೆ. ಅಕ್ರಮ ಸಂಪಾದನೆ ಹಾಗೂ ಅಕ್ರಮ ಹಣ ವರ್ಗಾವಣೆಯ ಪ್ರಕರಣದಲ್ಲಿ ತಿಹಾರ್ ಯಾತ್ರೆ ಮುಗಿಸಿ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪಕ್ಷದ ಕಚೇರಿಗೆ ಭೇಟಿ ನೀಡುವುದಕ್ಕಿಂತ ಹೆಚ್ಚಾಗಿ ಕೋರ್ಟಿಗೆ ಅಲೆದಾಡುವುದರಲ್ಲೇ ತಲ್ಲೀನರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಮತ್ತು ಅವರ ಹಿರಿಮೆ!ನ317 ಬ್ಯಾಂಕ್‌ ಖಾತೆಗಳು, 200 ಕೋಟಿ ಅಕ್ರಮ ವರ್ಗಾವಣೆ, 800 ಕೋಟಿ ಬೇನಾಮಿ ಆಸ್ತಿ ಇಂತಹ ವ್ಯಕ್ತಿ ತಾಳೆ ಮರದಡಿಯಲ್ಲಿ ಹಾಲು ಕುಡಿಯಲು ಸಾಧ್ಯವೇ?

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಇವರೆಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಪಕ್ಷವೇ ಒಂದು ರೀತಿ, ಜಾಮೀನಿನ ಮೇಲೆ ಹೊರಗಿದೆ. ಭ್ರಷ್ಟಾಧ್ಯಕ್ಷರೇ, ಇಷ್ಟೆಲ್ಲಾ ಆದರೂ ಯಾವ ನೈತಿಕತೆಯಿಂದ ಬಿಜೆಪಿ ಮೇಲೆ ಆರೋಪಿಸುತ್ತೀರಿ? ಎಂದು ಬಿಜೆಪಿ ತಿರುಗೇಟು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್