* ಕರ್ನಾಟಕ ರಾಜಕೀಯದಲ್ಲಿ ಜೋರಾದ ಹಿಜಾಬ್ ಹಾಗೂ ರಾಷ್ಟ್ರಧ್ವಜ ವಿವಾದ
*ಆರೋಪ-ಪ್ರತ್ಯಾರೋಪ ಮಾಡುತ್ತಿರುವ ಕಾಂಗ್ರೆಸ್-ಬಿಜೆಪಿ ನಾಯಕರು
* ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್ ಅಜೆಂಡಾ, ಸಾಕ್ಷಿ ಕೊಟ್ಟ ಬಿಜೆಪಿ
ಬೆಂಗಳೂರು, (ಫೆ.18): ರಾಷ್ಟ್ರಧ್ವಜ ವಿಚಾರವಾಗಿ ಕಾಂಗ್ರೆಸ್ (Congress) ಹಾಗೂ ಬಿಜೆಪಿ(BJP) ನಾಯಕರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ.
ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್ ಸದನದಲ್ಲಿ ಧರಣಿ ನಡೆಸುತ್ತಿದ್ರೆ, ಹೊರಗೆ ಕೂಡು ಯೂತ್ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ.
ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು, ಇದಕ್ಕೆಲ್ಲಾ ಬಗ್ಗಲ್ಲ, ಜಗ್ಗಲ್ಲ, ನೋ ರಿಸೈನ್ ಎಂದ ಈಶ್ವರಪ್ಪ!
ಇನ್ನು ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂದು ಬಿಜೆಪಿ ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದೆ.
ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ. ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್ ವಿರೋಧಿಸುತ್ತಿದೆ ಕಿಡಿಕಾರಿದೆ.
ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ.
ಹಿಜಾಬ್ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ!!!
ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್ ವಿರೋಧಿಸುತ್ತಿದೆ.
ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್ ಪಕ್ಷದ ಶ್ರಮವಿದೆ. ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳೇ ಹಿಜಾಬ್ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್ ಪಕ್ಷದ ಶ್ರಮವಿದೆ.
ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳೇ ಹಿಜಾಬ್ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್ ಹಿಜಾಬ್ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ.
#ಹಿಂದೂವಿರೋಧಿಕಾಂಗ್ರೆಸ್
ಹಿಜಾಬ್ ಪರವಾಗಿರುವ ಕಾಂಗ್ರೆಸ್, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ? ಎಂದು ಪ್ರಶ್ನಿಸಿದೆ.
ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು?
ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!? ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ? ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು.
ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ? ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು ಎಂದು ಬಿಜೆಪಿ ಪ್ರಶ್ನಿಸಿದೆ.
ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!?
ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ.
ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ? pic.twitter.com/FmuyvKKttu
ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು.
ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ.
ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ? pic.twitter.com/oNgTxShoiq