ನಿಮಗೆ ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ? ಡಿಕೆಶಿಗೆ ಹೀಗೊಂದು ಪ್ರಶ್ನೆ

By Suvarna NewsFirst Published Jun 21, 2021, 6:10 PM IST
Highlights

* ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ಮತ್ತೆ ಶುರು
* ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟ್ ದಾಳಿ 
* ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ ಎಂದು ಡಿಕೆಶಿಗೆ ಪ್ರಶ್ನಿಸಿದ ಬಿಜೆಪಿ

ಬೆಂಗಳೂರು, (ಜೂನ್.21): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿತ್ತು. ಇದೀಗ ಕಾಂಗ್ರೆಸ್‌ನಲ್ಲಿನ ಮುಂದಿನ ಸಿಎಂ ಕೂಗಿಗೆ ಬಿಜೆಪಿ ಟ್ವಿಟ್ಟರ್‌ನಲ್ಲಿ ತಿರುಗೇಟು ಕೊಟ್ಟಿದೆ.

ಸಿದ್ದು ಮುಂದಿನ ಸಿಎಂ ವಿವಾದ: ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ ರವಾನೆ

 ಡಿಕೆಶಿಯುವರು ಕಾಂಗ್ರೆಸ್ಸಿನಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯರನ್ನು ತಲೆಯಲ್ಲಿ ಹೊತ್ತು ತಿರುಗಾಡುತ್ತಿರುವ ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯ ತೋರುತ್ತಿಲ್ಲ. ನಿಮಗೆ ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಕಾಂಗ್ರೆಸ್ಸಿನಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ ಎಂದು ಹೇಳುತ್ತಾರೆ.

ಆದರೆ ರನ್ನು ತಲೆಯಲ್ಲಿ ಹೊತ್ತು ತಿರುಗಾಡುತ್ತಿರುವ ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯ ತೋರುತ್ತಿಲ್ಲ.

ಸಿದ್ದರಾಮಯ್ಯರ ಭಯ ಕಾಡುತ್ತಿದೆಯೇ ನಿಮಗೆ, ಡಿಕೆಶಿ?

1/3

— BJP Karnataka (@BJP4Karnataka)

ಬಿಜೆಪಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವ ಡಿಕೆಶಿ, ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಹೋರಾಟದ ಬಗ್ಗೆ ಮೌನವಾಗಿದ್ದಾರೆ. ಮುಂದಿನ ಸಿಎಂ ಸ್ಥಾನದ ವಿಚಾರವನ್ನು‌ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ಮುನ್ನಲೆಗೆ ಬಿಟ್ಟಿದ್ದಾರೆ. ಆದರೆ ದುರ್ಬಲ ಅಧ್ಯಕ್ಷರಿಗೆ ಏನೂ ಮಾಡಲಾಗುತ್ತಿಲ್ಲ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರೇ ಸುಪ್ರೀಂ ಎಂದು ಪರಮೇಶ್ವರ್ ಹೇಳಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರೇ ನಿಮಗೆ ಕ್ರಮ ಕೈಗೊಳ್ಳಲು ಧೈರ್ಯವಿಲ್ಲವೇ? ಜಮೀರ್ ವಿರುದ್ಧ ಕ್ರಮ ತೆಗೆದುಕೊಂಡರೆ ವಲಸೆ ನಾಯಕ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗುವ ಭಯ ನಿಮ್ಮನ್ನು ಕಾಡುತ್ತಿದೆಯೇ, ಡಿಕೆಶಿ? ಎಂದು ಪ್ರಶ್ನಿಸಿದೆ.

ಬಿಜೆಪಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವ , ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಹೋರಾಟದ ಬಗ್ಗೆ ಮೌನವಾಗಿದ್ದಾರೆ.

ಮುಂದಿನ ಸಿಎಂ ಸ್ಥಾನದ ವಿಚಾರವನ್ನು‌ ಅವರು ತಮ್ಮ ಬೆಂಬಲಿಗರ ಮೂಲಕ ಮುನ್ನಲೆಗೆ ಬಿಟ್ಟಿದ್ದಾರೆ, ಆದರೆ ದುರ್ಬಲ ಅಧ್ಯಕ್ಷರಿಗೆ ಏನೂ ಮಾಡಲಾಗುತ್ತಿಲ್ಲ.

2/3

— BJP Karnataka (@BJP4Karnataka)

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರೇ ಸುಪ್ರೀಂ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ
ಅವರೇ ನಿಮಗೆ ಕ್ರಮ ಕೈಗೊಳ್ಳಲು ಧೈರ್ಯವಿಲ್ಲವೇ?

ಜಮೀರ್ ವಿರುದ್ಧ ಕ್ರಮ ತೆಗೆದುಕೊಂಡರೆ ವಲಸೆ ನಾಯಕ ಅವರ ಕೆಂಗಣ್ಣಿಗೆ ಗುರಿಯಾಗುವ ಭಯ ನಿಮ್ಮನ್ನು ಕಾಡುತ್ತಿದೆಯೇ, ಡಿಕೆಶಿ?

3/3

— BJP Karnataka (@BJP4Karnataka)
click me!