ನಾಯಕತ್ವ ಬದಲಾವಣೆ ಗೊಂದಲ ನಿವಾರಣೆಗೆ ಬಂದ ಅರುಣ್ ಸಿಂಗ್ ಮೊದಲ ಪ್ರತಿಕ್ರಿಯೆ

Published : Jun 16, 2021, 05:02 PM ISTUpdated : Jun 16, 2021, 05:08 PM IST
ನಾಯಕತ್ವ ಬದಲಾವಣೆ ಗೊಂದಲ ನಿವಾರಣೆಗೆ ಬಂದ ಅರುಣ್ ಸಿಂಗ್ ಮೊದಲ ಪ್ರತಿಕ್ರಿಯೆ

ಸಾರಾಂಶ

* ರಾಜ್ಯಕ್ಕೆ ಆಗಮಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ * ನಾಯಕತ್ವ ಬದಲಾವಣೆ ಗೊಂದಲ ನಿವಾರಿಸಲು ಆಗಮಿಸಿದ ಸಿಂಗ್ * ಮೂರು ದಿನ ಸರಣಿ ಸಭೆ ನಡೆಸಲಿರುವ ಉಸ್ತುವಾರಿ

ಬೆಂಗಳೂರು (ಜೂನ್.16):  ನಾಯಕತ್ವ ಬದಲಾವಣೆ ಚರ್ಚೆ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನವನ್ನು ಶಮನ ಮಾಡಲು ಉಸ್ತುವಾರಿ ಅರುಣ್ ಸಿಂಗ್ ಕೊನೆಗೂ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಇಂದು(ಬುಧವಾರ) ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದರು. 

ಬೆಂಗಳೂರಿಗೆ ಬಂದಿಳಿದ ಬಿಜೆಪಿ ಉಸ್ತುವಾರಿ, ರಾಜ್ಯ ರಾಜಕೀಯದಲ್ಲಿ ಸಂಚಲನ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್,  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಇದನ್ನು ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಕ್ವಾರಂಟೈನ್‌ನಲ್ಲಿದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಚರ್ಚಿಸಲು ಕರ್ನಾಟಕಕ್ಕೆ ಆಗಮಿಸಿದ್ದೇನೆ ಎಂದರು.

ಈ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅರುಣ್ ಸಿಂಗ್ ಯಾವುದೇ ಪ್ರತಿಕ್ರಿಯಿಸದೇ ಹೊರಟು ಹೋದರು.   ಅರುಣ್ ಸಿಂಗ್ ಆಗಮಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಬಿರುಸುಕೊಂಡಿದ್ದು, ಸಚಿವರು, ಶಾಸಕರು ಭೇಟಿಗೆ ತುದಿಗಾಲಲ್ಲಿ ನಿಂತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ