
ಬೆಂಗಳೂರು(ಜು.20): ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ನಡ ಚಿತ್ರರಂಗ ಸಂಕಷ್ಟಗಳಿಂದ ಬಳಲುತ್ತಿದ್ದರೂ, ಅವುಗಳಿಗೆ ಕಿವಿಗೊಡದ ಮುಖ್ಯಮಂತ್ರಿಗಳು, ಸಿನಿಮಾ ಟಿಕೆಟ್, ಒಟಿಟಿಗಳ ಚಂದಾದಾರಿಕೆಯ ಮೇಲೆ ಶೇ.2ರಷ್ಟು ತೆರಿಗೆಯನ್ನು ವಿಧಿಸಿ ಹಣದೋಚಲು ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಹೋರಾಟಗಾರರ (ಕ್ಷೇಮಾಭಿವೃದ್ಧಿ) ಮಸೂದೆ-2024 ಅನ್ನು ಅನುಮೋದನೆಗೆ ಇಟ್ಟಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.
ಕರ್ನಾಟಕದ ಸರ್ಕಾರ ಇದೊಂದು ಗೋಲ್ಮಾಲ್ ಗೌರ್ನಮೆಂಟ್: ಶೋಭಾ ಕರಂದ್ಲಾಜೆ ವಾಗ್ದಾಳಿ
ಈಗಾಗಲೇ ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ರಣಹೇಡಿ ಕಾಂಗ್ರೆಸ್ ಸರ್ಕಾರ ಈಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.