ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಶಾಸಕಾಂಗ ಸಭೆ ರದ್ದು

By Suvarna NewsFirst Published Jul 20, 2021, 10:43 PM IST
Highlights

* ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
* ಕುತೂಹಲಕಾರಿ ಬೆಳವಣಿಗೆಯಲ್ಲಿ ಶಾಸಕಾಂಗ ಸಭೆ
* ಹೈಕಮಾಂಡ್‌ ಸೂಚನೆ ಮೇರೆಗೆ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದ ಸಿಎಂ ಬಿಎಸ್‌ವೈ

ಬೆಂಗಳೂರು, (ಜು.20): ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆದಿದ್ದ ಬಿಜೆಪಿ ಶಾಸಕಾಂಗ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 26 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಅಂತೆಲ್ಲಾ ಎಂದೆಲ್ಲಾ ಹೇಳಲಾಗಿತ್ತು.

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

ಆದ್ರೆ, ಇದೀಗ ದಿಢೀರ್ ಬಿಜೆಪಿ ಶಾಸಕಾಂಗ ಸಭೆಯನ್ನು ರದ್ದು ಮಾಡಲಾಗಿದ್ದು, ಬದಲಿಗೆ ಶಾಸಕರುಗಳಿಗೆ ಭೋಜನಕೂಟ ಏರ್ಪಡಿಸಲಾಗಿದೆ. ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೋಜನಕೂಟ ಆಯೋಜಿಸಲಾಗಿದೆ. 

ಸಿಎಂ ಬಿಎಸ್‌ವೈ ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ಎಲ್ಲಾ ಶಾಸಕರನ್ನು ಗಣನೆಗೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ ಎಂದು ಹೈಕಮಾಂಡ್ ಸೂಚಿಸಿತ್ತು. 

ಅದರಂತೆ ಯಡಿಯೂರಪ್ಪ ಅವರು ಜು.26ಕ್ಕೆ ಎರಡು ವರ್ಷದ ಸಂಭ್ರಮಾಚರಣೆಯ ಖುಷಿಯ ಜತೆ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದರು. ಈಗ ಕುತೂಹಲಕಾರಿ ಬೆಳವಣಿಗೆಯಲ್ಲಿ ಶಾಸಕಾಂಗ ಸಭೆ ರದ್ದಾಗಿದೆ.

click me!