ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಿತ್ತಾಟ, ಇತ್ತ ಬಿಜೆಪಿಗೆ ಚೆಲ್ಲಾಟ

Published : Jun 28, 2021, 04:00 PM IST
ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಿತ್ತಾಟ, ಇತ್ತ ಬಿಜೆಪಿಗೆ ಚೆಲ್ಲಾಟ

ಸಾರಾಂಶ

* ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಿತ್ತಾಟ * ಕಾಂಗ್ರೆಸ್‌ನಲ್ಲಿ  ನಡೆಯುತ್ತಿರುವ ಬೆಳವಣಿಗೆ ಬಿಜೆಪಿ ಲೇವಡಿ * ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು, (ಜೂನ್.28): ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಿತ್ತಾಟ ಜೋರಾಗಿದ್ರೆ, ಇತ್ತ ಬಿಜೆಪಿಗೆ ಚೆಲ್ಲಾಟವಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ  ನಡೆಯುತ್ತಿರುವ ಬೆಳವಣಿಗೆಯನ್ನು ಬಿಜೆಪಿ ಲೇವಡಿ ಮಾಡಿದೆ. 

ಈ ಬಗ್ಗೆ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿರುವ  ರಾಜ್ಯ ಬಿಜೆಪಿ,  ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ,ಮಾಜಿ ಸಚಿವ ಮುನಿಯಪ್ಪ‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ?ಎಂದು ಸ್ಪಷ್ಟಪಡಿಸಬೇಕೆಂದು  ಪ್ರಶ್ನಿಸಿದೆ.

ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

ಕಾಂಗ್ರೆಸ್ ಪಕ್ಷ ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದೆ. 

ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ. ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ. ಅದೀಗ ನಿಜವಾಗುತ್ತಿದೆ!

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಕಾಂಗ್ರೆಸ್ ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ. ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.

ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!