ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೂ ಯತ್ನಾಳ್‌ ಪರಿಗಣಿಸದ ಹೈಕಮಾಂಡ್: ಪದಾಧಿಕಾರಿಗಳ ಪಟ್ಟಿ ಇಲ್ಲಿದೆ ನೋಡಿ..

By Sathish Kumar KHFirst Published Dec 23, 2023, 8:07 PM IST
Highlights

ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯದ ಪದಾಧಿಪದಾಧಿಕಾರಿಗಳ ಪಟ್ಟಿ ಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಉಪಾಧ್ಯಕ್ಷ, ಕಾಯದರ್ಶಿ ಸೇರಿ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು (ಡಿ.23): ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯದ ಪದಾಧಿಪದಾಧಿಕಾರಿಗಳ ಪಟ್ಟಿ ಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 10 ಜನ ಉಪಾಧ್ಯಕ್ಷರು, 4 ಮಂದಿ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ಕಾರ್ಯದರ್ಶಿಗಳು, ರಾಜ್ಯ ಖಜಾಂಚಿ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಆದರೆ, ಇದ್ಯಾವುದರಲ್ಲೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಪರಿಗಣಿಸಿಲ್ಲ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕರನ್ನಾಗಿ ಆರ್. ಅಶೋಕ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಸ್ವತಃ ಚಳಿಗಾಲದ ಅಧಿವೇಶನದಲ್ಲಿಯೇ ಸ್ವಪಕ್ಷೀಯರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಬಿಜೆಪಿ ಉಳಿದ ಪದಾಧಿಕಾರಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ.

ಜನವರಿ ತಿಂಗಳೊಳಗೆ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಕಂದಾಯ ಸಚಿವ ಕೃಷ್ಣಬೈರೇಗೌಡ!

ಬಿಜೆಪಿಗೆ ಮೇಜರ್ ಸರ್ಜರಿ: ಈಗಾಗಲೇ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳಿಂದ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ತಳಮಟ್ಟದಿಂದ ಸಂಘಟನೆಗೆ ಕೈ ಹಾಕಿದ್ದು, ಸ್ಥಳೀಯ ನಾಯಕರನ್ನು ಸೆಳೆದುಕೊಳ್ಳುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೆ, ಅಧಿಕೃತವಾಗಿ ಪ್ರಚಾರ ಕಾರ್ಯಕ್ಕೆ ಯಾವುದೇ ಪಕ್ಷಗಳು ಮುಂದಾಗಿಲ್ಲ. ಇನ್ನು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡ ಹಿನ್ನೆಲೆಯಲ್ಲಿ ಈಗ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಜವಾಬ್ದಾರಿಗಳನ್ನು ಬೇರೆಯವರಿಗೆ ಹಂಚಿಕೆ ಮಾಡಿದೆ. ಇಂದು ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಬಿಜೆಪಿ ತನ್ನ ಎಲ್ಲ ಮೋರ್ಚಾಗಳ ಅಧ್ಯಕ್ಷರ ಹುದ್ದೆಗಳನ್ನು ಹೊಸಬರಿಗೆ ಹಂಚಿಕೆ ಮಾಡಿದೆ. ಇನ್ನು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ 10 ಮಂದಿ ಮತ್ತು ಪ್ರಧಾನ ಕಾರ್ಯುದರ್ಶಿಗಳ ಸ್ಥಾನಕ್ಕೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕೆಲವರಿಗೆ ಪಕ್ಷ ಸಂಘಟನೆ ಜವಾಬ್ದಾರಿಯನ್ನು ನೀಡಲಾಗಿದ್ದು, ಲೋಕಸಭಾ ಟಿಕೆಟ್ ನೀಡದಿರಲು ಕೂಡ ಯೋಜನೆ ರೂಪಿಸಲಾಗಿದೆ.

click me!