'ಶಿರಾದಲ್ಲಿ ಕಾಂಗ್ರೆಸ್ ಸೋಲಿಸಲು ಡಿ.ಕೆ. ಶಿವಕುಮಾರ್ ತಲೆಬಿಸಿ ಮಾಡಿಕೊಂಡಿದ್ರು'

By Suvarna NewsFirst Published Nov 8, 2020, 3:20 PM IST
Highlights

ಶಿರಾ ಹಾಗೂ ಆರ್‌ಆರ್‌ ನಗರ ಬೈ ಎಲೆಕ್ಷನ್‌ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಇದರ ಮಧ್ಯೆ ಬಿಜೆಪಿ ಅಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.

ತುಮಕೂರು, (ನ.08): ಸಿದ್ದರಾಮಯ್ಯ ಶಿರಾ ಮತ್ತು ಡಿ.ಕೆ. ಶಿವಕುಮಾರ್ ಆರ್‌.ಆರ್‌. ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರು. ಡಿ.ಕೆ.ಶಿವಕುಮಾರ್, ಶಿರಾದಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದಕ್ಕಿಂತ ಸೋಲಿಸುವುದು ಹೇಗೆ ಎನ್ನುವ ಬಗ್ಗೆ ಹೆಚ್ಚು ತಲೆಬಿಸಿ ಮಾಡಿಕೊಂಡಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರ್‌.ಆರ್‌. ನಗರದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸುವುದು ಹೇಗೆ ಎನ್ನುವ ಬಗ್ಗೆ ಯೋಚಿಸುತ್ತಿದ್ದರು. ಹೀಗೆ ಕಾಂಗ್ರೆಸ್‌ನ ಒಳಜಗಳ ಸಹ ಬಿಜೆಪಿಗೆ ಈ ಉಪಚುನಾವಣೆಯಲ್ಲಿ ಅನುಕೂಲವಾಗಿದೆ ಎಂದರು.

'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ' 

.ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಕಳೆದು ಹೋಗುವ ಭಯ ಇದೆ. ಈ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್‌ನ ಬೀದಿ ಜಗಳವನ್ನು ಮತ್ತಷ್ಟು ಬೀದಿಗೆ ತರಲಿದೆ. ಶಿರಾದಲ್ಲಿ 25 ಸಾವಿರಕ್ಕಿಂತ ಹೆಚ್ಚು ಮತಗಳು ಹಾಗೂ ಆರ್‌.ಆರ್‌.ನಗರದಲ್ಲಿ 40 ಸಾವಿರ ಮತಗಳಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋತಿದ್ದೇವೆ ಮತ್ತು ಸೋಲಿನ ಭಯ ಉಂಟಾದಾಗ ಕಾಂಗ್ರೆಸ್ ನಾಯಕರು ಇವಿಎಂ ಸರಿ ಇಲ್ಲ ಎಂದು ದೂರುವರು. ಅನುಮಾನ ವ್ಯಕ್ತಪಡಿಸುವರು. ನಮ್ಮ ಕೈಯಲ್ಲಿಯೇ ಇವಿಎಂ ಇದ್ದಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಗೆಲ್ಲಲು ಬಿಡುತ್ತಿದ್ದೇವಾ. ಕಾಂಗ್ರೆಸ್ ನಾಯಕರ ಈ ಆರೋಪ ಮತದಾರರಿಗೆ ಮಾಡುವ ಅವಮಾನ ಎಂದರು.

click me!