
ಬೆಂಗಳೂರು, (ಸೆ.13): ಕಾಂಗ್ರೆಸ್ ನಾಯಕರಿಂದ ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು (ಸೆ.13) ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಕಟೀಲ್, ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ. ಇಲ್ಲದಿದ್ದರೆ ಎತ್ತುಗಳೆಲ್ಲಾ ಕಸಾಯಿಖಾನೆಗೆ ಹೋಗುತ್ತಿದ್ದವು ಎಂದರು.
'ಪ್ರಾಣಿಗಳಿಗೆ ತೊಂದ್ರೆ ಕೊಡೋ ಬದ್ಲು ಸೈಕಲ್ನಲ್ಲಿ ಬಂದಿದ್ರೆ ಚೆನ್ನಾಗಿರ್ತಿತ್ತು'
ಇನ್ನು ಇದೇ ವೇಳೆ ನಂಜನಗೂಡಿನಲ್ಲಿ ಏಕಾಏಕಿ ದೇವಾಲಯ ತೆರವು ವಿಚಾರವಾಗಿಯೂ ಮಾತನಾಡಿದ್ದು, ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿ ಇದೆ. ಆದರೆ ಧಾರ್ಮಿಕ ಕ್ಷೇತ್ರಗಳನ್ನು ಉಳಿಸಬೇಕಾದ ಅಗತ್ಯವಿದೆ. ಹೀಗಾಗಿ ಸರ್ಕಾರದ ಜತೆ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಹೇಳಿದರು.
ಇನ್ನು ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕ ಎತ್ತಿನ ಬಂಡಿ ಪ್ರತಿಭಟನೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಎತ್ತಿನ ಬಂಡಿ ಏರಿ ಹಸುಗಳಿಗೆ ತೊಂದರೆ ಕೊಡೋ ಬದಲು ಸೈಕಲ್ ಏರಿ ಪ್ರತಿಭಟನೆ ಮಾಡಿದ್ದರೆ ಚೆನ್ನಾಗಿರ್ತಿತ್ತು ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.