Karnataka Politics: ಬಿಜೆಪಿ ರೆಬೆಲ್ ನಾಯಕರ ಕಚ್ಚಾಟ ಆರಂಭ: ಸಿದ್ದರಾಮಯ್ಯ ಸಿಎಂ ಆಗದಂತೆ ತಡೆಯಲು ಯತ್ನ

By Sathish Kumar KHFirst Published May 17, 2023, 6:19 PM IST
Highlights

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯ ಮಾಜಿ ಸಚಿವರು (ರೆಬೆಲ್‌ ಶಾಸಕರು) ಈಗ ಸಮ್ಮಿಶ್ರ ಸರ್ಕಾರ ಬೀಳಿಸಿದ್ದರ ಬಗ್ಗೆ ಸಿದ್ದರಾಮಯ್ಯ ಅವರ ಪರವಾಗಿ ಭಾರಿ ಪರ- ವಿರೋಧ ಕಿತ್ತಾಟವನ್ನು ಆರಂಭಿಸಿದ್ದಾರೆ.

ಬೆಂಗಳೂರು (ಮೇ 17): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯ ಮಾಜಿ ಸಚಿವರು (ರೆಬೆಲ್‌ ಶಾಸಕರು) ಈಗ ಸಮ್ಮಿಶ್ರ ಸರ್ಕಾರ ಬೀಳಿಸಿದ್ದರ ಬಗ್ಗೆ ಸಿದ್ದರಾಮಯ್ಯ ಅವರ ಪರವಾಗಿ ಭಾರಿ ಪರ- ವಿರೋಧ ಕಿತ್ತಾಟವನ್ನು ಆರಂಭಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣವೆಂದು ಹೇಳಿದ್ದ ಡಾ.ಕೆ. ಸುಧಾಕರ್‌ಗೆ, ಎಂಟಿಬಿ ನಾಗರಾಜ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಜಿ ಸಚಿವ ಸುಧಾಕರ್‌ ಅವರು ಸಿದ್ದರಾಮಯ್ಯ ಕುರಿತ ವಿಚಾರಗಳನ್ನು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಬರೋಬ್ಬರಿ 7 ಗಂಟೆಗಳ ಬಳಿಕ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್‌ ಸದಸ್ಯ ಎಂಟಿಬಿ ನಾಗರಾಜ್‌ ಅವರು, ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಬಂದಿದ್ದಾರೆ. "ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ" ಎಂದಿದ್ದಾರೆ. 

Karnataka CM Announcement ನನ್ನ ಸಿಎಂ ಮಾಡಿದ್ರೆ ಸಿದ್ದು ಸವಾಲು ಎದುರಿಸ್ತೇನೆ: ಲೋಕಸಭೆ ಚುನಾವಣೇಲಿ 20 ಸೀಟ್‌ ಗೆಲ್ಲಿಸ್ತೀನಿ

ಸೋಲಿನ ಭ್ರಮನಿರನಸದಲ್ಲಿ ಸುಧಾಕರ್‌ ಮಾತು: ಮುಂದುವರೆದು "ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ಅವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?" ಎಂದು ಪ್ರಶ್ನಿಸಿದ್ದಾರೆ. "ನಾವು ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು?" ಎಂದು ಕಿಡಿಕಾರಿದ್ದಾರೆ.

ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.

— MTB Nagaraj (@MTB_Nagaraj)

ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಭಾರಿ ಕಸರತ್ತು ನಡೆಸುತ್ತಿದೆ. ಈ ವೇಳೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎಂಬ ಅರ್ಥದಲ್ಲಿ ಈಗಾಗಲೇ ಸುಧಾಕರ್‌ ಹೇಳಿಕೊಂಡೊದ್ದರು. ಇಂದು (ಬುಧವಾರ) ಟ್ವೀಟ್‌ ಮಾಡಿ "2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

Karnataka CM Announcement: ಡಿಕೆಶಿ-ಸಿದ್ದು ಸಿಟ್ಟು ಶಮನಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ!

ಸಮ್ಮಿಶ್ರ ಸರ್ಕಾರ ಇರೊಲ್ಲ ಎಂದಿದ್ದ ಸಿದ್ದರಾಮಯ್ಯ: "2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು". ಎಂದು ಟ್ವೀಟ್‌ ಮಾಡಿದ್ದರು. ಮುಂದುವರೆದು "ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?" ಎಂದು ಟ್ವೀಟ್‌ ಮೂಲಕ ಟೀಕೆ ಮಾಡಿದ್ದರು.

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

1/3

— Dr Sudhakar K (@mla_sudhakar)
click me!