* ಬಿಜೆಪಿ ಹಿರಿಯ ಮುತ್ಸದ್ಧಿ, ಮಾಜಿ ಶಾಸಕ ಎ.ಜಿ.ಕೊಡ್ಗಿ ನಿಧನ
* ಕಳೆದ ವಾರ ಮಾಜಿ ಶಾಸಕರಿಗೆ ಡೆಂಘೆ ಜ್ವರ ಕಾಣಿಸಿಕೊಂಡಿತ್ತು
* 1978ರಲ್ಲಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಎ.ಜಿ.ಕೊಡ್ಗಿ
ಉಡುಪಿ, (ಜೂನ್.13): ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ.ಕೊಡ್ಗಿ (93) ಅನಾರೋಗ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ವಾರ ಮಾಜಿ ಶಾಸಕರಿಗೆ ಡೆಂಘೆ ಜ್ವರ ಕಾಣಿಸಿಕೊಂಡಿತ್ತು.ಇದರಿಂದ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಕೊನೆಯುಸಿರೆಳೆದಿದ್ದಾರೆ.
undefined
ಎ.ಜಿ.ಕೊಡ್ಗಿ ಅವರು ಪೂರ್ಣ ಹೆಸರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ. 1972 ಮತ್ತು 1978ರಲ್ಲಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದರು. ಕಾಂಗ್ರೆಸ್‌ನಲ್ಲಿದ್ದ ಅವರು ಕಾಂಗ್ರೆಸ್ ಇಬ್ಭಾಗವಾದಾಗ ಅರಸು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. 1993ರಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಉಪಾಧ್ಯಕ್ಷ ಸಹಿತ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು.
Udupi ತಂಬಾಕು ಸೇವನೆ ಅಪಾಯದ ಕುರಿತು ಕಲಾವಿದನಿಂದ ವಿಶಿಷ್ಟ ಜಾಗೃತಿ
ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕೊಡ್ಗಿ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರೈತಸಂಘ ಅಧ್ಯಕ್ಷ ಅಶೋಕ್ ಕೊಡ್ಗಿ ಸೇರಿ ಐವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಅಮಾಸೆಬೈಲಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ಜೂನ್.14) ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ..