
ಶಿಕಾರಿಪುರ(ಏ.09): ತವರು ಕ್ಷೇತ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಸತತ 2ನೇ ದಿನವಾದ ಸೋಮವಾರವೂ ಅಣ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದರು.
ಪಟ್ಟಣದ ಮಾಳೆರಕೇರಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು. ಈ ಸರ್ಕಾರದಲ್ಲಿ ಮುಂದೆ ಎರಡು ತಿಂಗಳ ನಂತರ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣ ಇರುವುದಿಲ್ಲ. ಮತ್ತೆ ಲಕ್ಷ ಕೋಟಿಗಳಷ್ಟು ಸಾಲ ತೆಗೆಯಲು ಸನ್ನದ್ದರಾಗಿದ್ದಾರೆ. ರಾಜ್ಯವನ್ನು ಸಾಲದ ದವಡೆಗೆ ನೂಕುತಿದ್ದಾರೆ ಎಂದು ಆರೋಪಿಸಿದರು.
ಲೋಕಸಭೆ ಚುನಾವಣೆ 2024: ಗನ್ ಇಟ್ಕೊಂಡ ವ್ಯಕ್ತಿ ಸಿದ್ದರಾಮಯ್ಯಗೆ ಹಾರ ಹಾಕಿದ..!
ಈ ಚುನಾವಣೆ ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದೆ. ಪ್ರತಿ ಮತದಾರರು ಕೇಂದ್ರ ಸರ್ಕಾರದ ಒಂದಲ್ಲ ಒಂದು ಯೋಜನೆಯ ಫಲಾನುಭವಿಗಳಾಗಿ ದ್ದಾರೆ. ಅವರಿಗೆ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಆರ್ಥಿಕವಾಗಿ ದೇಶ 50ನೇ ಸ್ಥಾನದಲ್ಲಿ ಇತ್ತು. ಕಳೆದ ಹತ್ತು ವರ್ಷದ ಈಚೆಗೆ ಮೋದಿ ಅವರ ಶ್ರಮದಿಂದಾಗಿ ಆರ್ಥಿಕ ಪ್ರಗತಿಯಲ್ಲಿ ಐದನೇ ಸ್ವಾವಲಂಬಿ ದೇಶವಾಗಿದೆ ಎಂದರು.
ಶಿಕಾರಿಪುರ ತಾಲೂಕಿನಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಹಿಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರರ ಶ್ರಮವಿದೆ. ರಾಜ್ಯ ದಲ್ಲಿ ಹಿಂದೆಂದೂ ಕಾಣದಂತಹ ತೀವ್ರ ಬರ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಪರಿಹಾರ ಧನವನ್ನು ಬಿಡುಗಡೆ ಮಾಡದೆ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ತನ್ನ ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಹರಣ ಮಾಡುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.