
ಬೆಂಗಳೂರು(ಏ.07): ಪ್ರಧಾನಿ ನರೇಂದ್ರ ಮೋದಿ ಕೇವಲ ದೇಶಕ್ಕೆ ಮಾತ್ರ ನಾಯಕತ್ವ ನೀಡಿಲ್ಲ. ಬದಲಿಗೆ ವಿಶ್ವಕ್ಕೆ ನಾಯಕತ್ವ ಕೊಟ್ಟವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಬಣ್ಣಿಸಿದ್ದಾರೆ.
ಶನಿವಾರ ಬಿಜೆಪಿಯ 44ನೇ ಸಂಸ್ಥಾಪನಾ ದಿನ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬುದೆಲ್ಲಾ ಸುಳ್ಳು. ಅಲ್ಪಸಂಖ್ಯಾತ ಮಹಿಳೆಯರಿಗೆ ಗೌರವ ಸಿಗಬೇಕು ಎಂಬ ಕಾರಣಕ್ಕಾಗಿ ತ್ರಿವಳಿ ತಲಾಖ್ ರದ್ದು ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ವರ್ಗದವರನ್ನು ಸಮನಾಗಿ ಕಾಣುತ್ತಾರೆ ಎಂದರು.
ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗೆ ಕೋರ್ಟ್ ಮೊರೆ ಹೋದ ಈಶ್ವರಪ್ಪ, ಬಳಸುವ ಹಕ್ಕಿಲ್ಲ ಎಂದ ಅಶೋಕ್
ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನರೇಂದ್ರ ಮೋದಿಯವರು ನೀಡಿದ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತಿಳಿಸಬೇಕು. ಯೋಧರ ರೀತಿಯಲ್ಲಿ ನಾವು ಸಂಘಟಿತರಾಗಿ ಕೆಲಸ ವಾತವರಣ
ಮಾಡಬೇಕು. ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದನ್ನು ನೋಡುವುದಕ್ಕೆ ಬಹಳ ದಿನಗಳು ದೂರ ಇಲ್ಲ. ಬಿಜೆಪಿ- ಜೆಡಿಎಸ್ 28 ಕ್ಷೇತ್ರಗಳಲ್ಲಿ ಗೆಲ್ಲುವ ಇದೆ. ಮೋದಿಯವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತನೆ ಮಾಡಬೇಕು ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.