
ಬೆಂಗಳೂರು(ಆ.17): ದೇಶಾದ್ಯಂತ ಆರಂಭಿಸಲು ಉದ್ದೇಶಿಸಿರುವ ಬಿಜೆಪಿಯ ಸದಸ್ಯತ್ವ ಅಭಿಯಾನ ಸೇರಿದಂತೆ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವ ಸಂಬಂಧ ಇಂದು(ಶನಿವಾರ) ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಲಿದೆ. ಈ ಸಂಬಂಧ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ಸಮಯಾವಕಾಶ ಸಿಕ್ಕಲ್ಲಿ ವಿಜಯೇಂದ್ರ ಅವರು ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಜಾರಕಿಹೊಳಿ, ಪ್ರತಾಪ್ ಕೂಡ ದೆಹಲಿಗೆ?:
ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೂಡ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರೂ ತೆರಳಿದ್ದಾರೆ ಎನ್ನಲಾಗುತ್ತಿದ್ದರೂ ಖಚಿತವಾಗಿಲ್ಲ.
ಸಂಘ, ವರಿಷ್ಠರ ಮಧ್ಯಸ್ಥಿಕೇಲಿ ವಿಜಯೇಂದ್ರ ಜೊತೆಗೆ ಮಾತುಕತೆ ಸಿದ್ಧ: ಯತ್ನಾಳ್
ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆ
ರಮೇಶ್ ಜಾರಕಿಹೊಳಿ ಅವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದಾರೆ ಎಂದು ಅವರ ಆಪ್ತರು ಸಮಜಾಯಿಷಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.