MLC Election: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾಯಕ 6 ವರ್ಷ ಉಚ್ಚಾಟನೆ

By Suvarna News  |  First Published Dec 16, 2021, 7:32 PM IST

* ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾಯಕ  6 ವರ್ಷ ಉಚ್ಚಾಟನೆ
*ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ರು
* ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರ ಸೂಚನೆಯಂತೆ ಬಿಜೆಪಿ ಸಸ್ಪೆಂಡ್


ಹಾವೇರಿ, ಡಿ.16): ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Election) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. 

ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರ ಸೂಚನೆಯಂತೆ ಮಲ್ಲಿಕಾರ್ಜುನನನ್ನ ಹಾವೇರಿ ಜಿಲ್ಲಾಧ್ಯಕ್ಷ ಕಲಕೋಟಿ  ಉಚ್ಚಾಟಿಸಿ ಇಂದು (ಗುರುವಾರ) ಆದೇಶ ಹೊರಿಸಿದ್ದಾರೆ. 

Tap to resize

Latest Videos

undefined

Council Election Karnataka : ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ರಮೇಶ್‌ ಜಾರಕಿಹೊಳಿ ?

ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ(Dharwad MLC Election) ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಲ್ಲಿಕಾರ್ಜುನ ಹಾವೇರಿಯನ್ನ ಉಚ್ಛಾಟಿಸಿದ್ದಾರೆ.

ಹಾವೇರಿ(Haveri) ಎಪಿಎಂಸಿ ಅಧ್ಯಕ್ಷನಾಗಿರೋ ಮಲ್ಲಿಕಾರ್ಜುನ ಹಾವೇರಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಿಂತು ಪರಾಭವಗೊಂಡಿದ್ದರು. ಮಲ್ಲಿಕಾರ್ಜುನ, ಬಿಜೆಪಿ ಪಕ್ಷದ ಸದಸ್ಯತ್ವ ಹೊಂದಿದ್ರೂ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಹಾವೇರಿ
ಎರಡೂ ರಾಷ್ಟ್ರೀಯ ಪಕ್ಷಗಳ ತಲಾ ಒಬ್ಬೊಬ್ಬ ಅಭ್ಯರ್ಥಿ ಗೆಲುವು ಸಾಧಿಸುವುದು ಖಚಿತ ಅನ್ನುವುದು ಗೊತ್ತಿದ್ದರೂ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಚುನಾವಣೆಗೆ ನಿಂತಿದ್ದರು. ಈ ಮುಂಚೆ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಹಾವೇರಿ ಚುನಾವಣಾ ಕಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸವಾಲೊಡ್ಡಿದ್ದರು. ಅವರನ್ನು ಸೇರಿಸಿ ಒಟ್ಟು 8 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು. ಆದ್ರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ.

Council Election Result: ಬೆಳಗಾವಿಯಲ್ಲಿ ಲಖನ್‌ ಗೆಲುವು, ಬಿಜೆಪಿಗೆ ರಮೇಶ ಜಾರಕಿಹೊಳಿ ಬಿಸಿತುಪ್ಪ!

ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್(Pradeep Shettar) ಎರಡನೇ ಪ್ರಾಶಸ್ತ್ಯ ಮತದಲ್ಲಿ ಗೆಲುವು ಸಾಧಿಸಿದ್ರೆ, ಅಚ್ಚರಿ ಎಂಬಂತೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್(Salim Ahmed) ಮೊದಲ ಪ್ರಾಶಸ್ತ್ಯ ಮತದಲ್ಲಿ ಗೆಲುವು ಸಾಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಿಜೆಪಿ ಭದ್ರಕೋಟೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadesh Shettar) ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಂತಹ (Pralhad Joshi) ಘಟಾನುಘಟಿ ನಾಯರು ಜಿಲ್ಲೆಯಲ್ಲಿ ಇದ್ದಾರೆ. ಆದ್ರೂ ಸಲೀಂ ಅಹ್ಮದ್ ಅವರ ಗೆಲುವು ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದಂತೂ ಸತ್ಯ...

ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮವಾಗುತ್ತಾ?
ಹೌದು..ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ (Belagavi MLC Election) ತಮ್ಮ ಸ್ವಪ್ರತಿಷ್ಠೆಗಾಗಿ ರಮೇಶ್ ಜಾರಕಿಹೊಳಿ(ramesh Jarkiholi) ಅವರು ಬಿಜೆಪಿ ನಾಯಕರ ವಿರುದ್ಧವೇ ತೊಡೆತಟ್ಟಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನ ಸೋಲಿಸಲು ಹೋಗಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರನ್ನ ಸೋಲಿಸಿದ್ದಾರೆ ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಚರ್ಚೆಗಳು ನಡೆದಿವೆ.

ಬಿಜೆಪಿ ನಾಯಕರು ನಿಮ್ಮ ಸಹೋದರ ಲಖನ್ ಜಾರಕಿಹೊಳಿ (Lakhan Jarkiholi) ಸ್ಪರ್ಧೆ ಮಾಡುವುದು ಬೇಡ ಅಂದ್ರು, ಅದ್ಯಾವುದನ್ನು ಕೇಳದೇ ರಮೇಶ್ ಜಾರಕಿಹೊಳಿ ಲಖನ್ ಅವರನ ಕಣಕ್ಕಿಳಿಸಿದ್ರು. ಆದ್ರೆ, ಫಲಿತಾಂಶ ರಮೇಶ್ ಜಾರಕಿಹೊಳಿ ಪ್ಲಾನ್ ಉಲ್ಟಾ ಮಾಡಿದೆ.ಇದರಿಂದ ರಮೇಶ್ ಜಾರಕಿಹೊಳಿ ಬಿಜೆಪಿ(BJP) ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬಿಜೆಪಿ ಅಧಿಕೃತ ಅಭ್ಯರ್ಥಿ ಸೋಲಿಗೆ ಕಾರಣರಾದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮವಾಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ. ರಮೇಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿರುವುದರಿಂದ ಕ್ರಮಕೈಗೊಳ್ಳುವುದು ಅನುಮಾನ ಎನ್ನುವ ಮಾತುಗಳು ಸಹ ಕೇಳಿಬರುತ್ತಿವೆ. 

click me!