Mekedatu Padayatre ಡಿಕೆಶಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ? ಸಿದ್ದುಗೆ ಪ್ರಶ್ನೆ

Published : Jan 10, 2022, 04:53 PM IST
Mekedatu Padayatre ಡಿಕೆಶಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ? ಸಿದ್ದುಗೆ ಪ್ರಶ್ನೆ

ಸಾರಾಂಶ

* ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ಸಿದ್ದರಾಮಯ್ಯ ದೂರ * ಸಿದ್ದರಾಮಯ್ಯನವರ ಕಾಲೆಳೆದ ಕರ್ನಟಕ ಬಿಜೆಪಿ * ಅನಾರೋಗ್ಯದಿಂದ ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯ

ಬೆಂಗಳೂರು, (ಜ.10): ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ನ ಎರಡನೇ ದಿನದ ಪಾದಯಾತ್ರೆ (Congress Padayatre) ಸಾಗಿದೆ. ಆದ್ರೆ, ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ಮೊದಲ ದಿನದ ಪಾದಯಾತ್ರೆಯಿಂದಲೇ ಹೊರ ಹೋಗಿದ್ದಾರೆ. ಇದರಿಂದ ಬಿಜೆಪಿ ಟ್ರಾಲ್ ಮಾಡುತ್ತಿದೆ.

ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು (Mekedatu Padayare) ಮೊಟಕುಗೊಳಿಸಿ ಸಿದ್ದರಾಮಯ್ಯ ವಾಪಸ್ ಆಗಿರುವುದಕ್ಕೆ ರಾಜ್ಯ ಬಿಜೆಪಿ (BJP) ಅವರನ್ನ ಕೆಣಕಿದೆ.

Mekedatu Padayatre ಪಾದಯಾತ್ರೆಯಲ್ಲಿದ್ದ ಸಿದ್ದರಾಮಯ್ಯಗೆ ಜ್ವರ, ಕಳವಳ ವ್ಯಕ್ತಪಡಿಸಿದ ಸಚಿವ

ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ(Siddaramaiah) ನಾಲ್ಕೇ ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸಿದೆ.

ಇನ್ನೂ ಕೋವಿಡ್ ಪರೀಕ್ಷೆಗೆ ನಿರಾಕರಿಸಿರುವ ಡಿಕೆ ಶಿವಕುಮಾರ್ ಅವರ ನಡೆಯನ್ನು ಸಹ ಬಿಜೆಪಿ ಟೀಕಿಸಿದೆ. ಮಾಸ್ಕ್ ಧರಿಸಿದೇ ಪಾದಯಾತ್ರೆ ನಡೆಸಲಾಗಿದೆ. ವಿಪರೀತ ಕೆಮ್ಮಿನ ನಡುವೆಯೂ ಕೋವಿಡ್ ಪರೀಕ್ಷೆ ನಿರಾಕರಿಸಿದ್ದೀರಿ. ನೆಲದ ಕಾನೂನಿನ ಬಗ್ಗೆ ಕಿಂಚಿತ್ ಗೌರವ ಇದೆಯೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಮೊದಲ ದಿನದ ಪಾದಯಾತ್ರೆಯಿಂದಲೇ ಸಿದ್ದು ವಾಪಸ್
ಮೇಕೆದಾಟು ಪಾದಯಾತ್ರೆಯ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆದು ಸುಸ್ತಾಗಿ ಬೇರೊಂದು ಕಾರಿನಲ್ಲಿ ವಾಪಸ್ಸಾಗಿದ್ದಾರೆ. 

Mekedatu Padayatre: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಜನರ ವಿರುದ್ಧ ಎಫ್‍ಐಆರ್

73 ವರ್ಷ ವಯಸ್ಸಿನ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ನೇತೃತ್ವ ವಹಿಸಿದ್ದರು. ಜನವರಿ 18ರವರೆಗೆ ನಡೆಯುವ ಈ ಪಾದಯಾತ್ರೆಗೆ ಇಂದು ಕನಕಪುರ ತಾಲ್ಲೂಕಿನ ಕಾವೇರಿ ತಟ, ಸಂಗಮದಲ್ಲಿ ಚಾಲನೆ ನೀಡಲಾಯಿತು. ಕೋವಿಡ್‌ ಕಾರಣ ಸರ್ಕಾರ ವೀಕೆಂಡ್‌ ಕರ್ಫ್ಯೂ ವಿಧಿಸಿದ್ದರೂ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ

ಮೊದಲ ದಿನ 15 ಕಿ.ಮೀ. ಪಾದಯಾತ್ರೆ ನಡೆಸಿ ಕನಕಪುರ ತಲುಪಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು ಕಾರಿನಲ್ಲಿ ವಾಪಸ್‌ ಕರೆದುಕೊಂಡು ಹೋಗಲಾಯಿತು.

ಎರಡನೇ ದಿನದ ಪಾದಯಾತ್ರೆಗೆ ಸಿದ್ದು ಗೈರು
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸ್ವಸ್ಥಗೊಂಡಿದ್ದು, ಮೇಕೆದಾಟು ಪಾದಯಾತ್ರೆಯಲ್ಲಿ ಮಂಗಳವಾರದಿಂದ ( ಜ.11) ಭಾಗವಹಿಸಲಿದ್ದಾರೆ.

ಸುಸ್ತು, ಜ್ವರದಿಂದ ಬಳಲಿದ್ದ ಅವರು ಬೆಂಗಳೂರಿಗೆ ವಾಪಾಸಾಗಿ ಕುಟುಂಬದ ವೈದ್ಯರಿಂದ ಚಿಕಿತ್ಸೆ ಪಡೆದು, ಅವರ ಸಲಹೆಯಂತೆ ವಿಶ್ರಾಂತಿ ಪಡೆದಿದ್ದರು.

ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಸೋಮವಾರ ಕೂಡಾ ತಮ್ಮ‌ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಂಗಳವಾರದಿಂದ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.‌

ಸಿದ್ದರಾಮಯ್ಯ, ಡಿಕೆಶಿ ಸೇರಿ 35 ಮಂದಿ ವಿರುದ್ಧ ಎಫ್​ಐಆರ್​
ಕಾಂಗ್ರೆಸ್​​ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಪಾದಯಾತ್ರೆ ಆಯೋಜಕರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್​​ ಠಾಣೆಯಲ್ಲಿ‌ ಎಫ್‌ಐಆರ್ ದಾಖಲಾಗಿದ್ದು, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಮೇಕೆದಾಟುನಿಂದ ಪಾದಯಾತ್ರೆ ಚಾಲನೆ ನೀಡಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಟೀಕಿಸಿದೆ. ಅಲ್ಲದೇ ಕೋವಿಡ್‌ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಚಿಂತನೆ ನಡೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ