
ಬೆಂಗಳೂರು, (ಜ.31): ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್ (Mohammed Nalapad) ಅಧಿಕಾರ ಸ್ವೀಕರಿಸಿದ್ದು, ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದ್ದಾರೆ. ಇದಕ್ಕೆ ಕರ್ನಾಟಕ ಬಿಜೆಪಿ (Karnataka BJP) ವ್ಯಂಗ್ಯವಾಗಿ ಟಾಂಗ್ ಕೊಟ್ಟಿದೆ.
ಅತ್ತು ಕರೆದು ಔತಣ ಮಾಡಿಸಿಕೊಂಡು ಎಂಥ ಮಾತಾಡಿಬಿಟ್ಟಿರಿ ಮಿಸ್ಟರ್ ನಲಪಾಡ್. ಮೊದಲು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡೋಕೆ ಸಿದ್ದರಾಮಯ್ಯ ಅವರು ಬಿಡುತ್ತಾರೆಯೇ ಎಂಬುದರ ಬಗ್ಗೆ ಮೊದಲು ತಿಳಿದುಕೊಳ್ಳಿ. ಆಮೇಲೆ ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿ ಎಂದು ಟೀಕಿಸಿದೆ.
Congress Politics: ಯುವ ಕಾಂಗ್ರೆಸ್ ಅಧ್ಯಕ್ಷಗೆ ನಲಪಾಡ್ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?
ಅಧಿಕಾರ ಸ್ವೀಕಾರ ಮಾಡಿದ ದಿನವಾದರೂ ಸ್ವಲ್ಪ ಒಳ್ಳೆಯ ಯೋಚನೆ ಮಾಡಿ. ನೀವು ಪ್ರಸ್ತಾಪ ಮಾಡಿದ ವಿಚಾರ ಕೈ ಗೂಡುವುದಿಲ್ಲ ಎಂದು ಅರ್ಥವಾಗಿ ಎಂತೆಂತವರೋ ಮೂಲೆಗುಂಪಾಗಿದ್ದಾರೆ. ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿಸುವುದು ಮರಳುಗಾಡಿನಲ್ಲಿ ಮರಿಚೀಕೆಯನ್ನು ಹಿಡಿದಂತೆ. ಎಂದಿಗೂ ಕೈಗೂಡದು ಎಂದು ಬರೆದು ಟ್ವೀಟ್ ಮಾಡಿದೆ.
ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಕ್ಕೂ ಮುನ್ನವೇ ಮುಹಮ್ಮದ್ ನಲಪಾಡ್ ಸೋಮವಾರ ಕಾಂಗ್ರೆಸ್ ಭವನದ ಕಚೇರಿಯಲ್ಲಿ ಪೂಜೆ ನೆರವೇರಿಸಿದ್ದಾರೆ.
ಪೂಜೆ ಬಳಿಕ ಮಾತನಾಡಿದ ನಲಪಾಡ್ , ಮಂಗಳವಾರ ಅಮಾವಾಸ್ಯೆ ಇದೆ. ಹಾಗಾಗಿ ಇಂದೇ ಕಚೇರಿ ಪೂಜೆ ಮಾಡಿದ್ದೇವೆ. ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಹಸ್ತಾಂತರವಿದೆ. ಕೆಪಿಸಿಸಿ ಕಚೇರಿಯಲ್ಲೇ ಮಾಡಿಕೊಳ್ತೇನೆ ಎಂದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತಾಗಿ ಎಐಸಿಸಿಯಿಂದಲೂ ಅಧಿಕೃತ ಆದೇಶವಿದೆ. ರಕ್ಷಾ ರಾಮಯ್ಯ ಅನುಮತಿ ಮೇಲೆಯೇ ಪೂಜೆ ಮಾಡಿದ್ದೇನೆ. ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುತ್ತೇನೆ ಎಂದು ತಿಳಿಸಿದರು.
ಕಳೆದ ಬಾರಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಮೊಹಮ್ಮದ್ ನಲಪಾಡ್ ಅವರಿಗೆ ಅತಿ ಹೆಚ್ಚು ಮತಗಳು ಬಂದಿದ್ದವು. ಆದರೆ, ಕೆಲ ವರ್ಷಗಳ ಹಿಂದೆ ಯುಬಿ ಸಿಟಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣ ಮೊಹಮ್ಮದ್ ನಲಪಾಡ್ ಪಾಲಿಗೆ ಮುಳುವಾಗಿತ್ತು.
ಅವರಿಗೆ ಆ ಸ್ಥಾನ ಕೈ ತಪ್ಪಿತ್ತು. ಅದರಂತೆ, ನಲಪಾಡ್ ಬಳಿಕ ಎರಡನೇ ಅತಿ ಹೆಚ್ಚು ಮತಗಳನ್ನ ಪಡೆದಿದ್ದ ರಕ್ಷ ರಾಮಯ್ಯ ಅವರಿಗೆ ಕೆಪಿಸಿಸಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಒಲಿದಿತ್ತು. ನಂತರ ಸಹ ರಕ್ಷ ರಾಮಯ್ಯ ಮತ್ತೊಂದು ಅವಧಿಗೆ ಅಂದರೆ 6 ತಿಂಗಳ ಅವಧಿಗೆ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.
ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದು, ಇದೀಗ ಈಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್ ಅಧಿಕಾರ ಸ್ವೀಕಾರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.