ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ತಮ್ಮ ಮೇಲೆ ಕೇಳಿ ಬಂದ ಭ್ರಷ್ಟಾಚಾರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ.
ಮಂಡ್ಯ, (ಸೆ.08): ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಿಎಸ್‌ವೈ ಪುತ್ರ ಬಿವೈ ವಿಜಯೇಂದ್ರ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಇಂದು (ಮಂಗಳವಾರ) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ್ಮ ಮೇಲೆ ಭ್ರಷ್ಟಾಚಾರದ ಆರೋಪಕ್ಕೆ ಸೂಕ್ಷ್ಮವಾಗಿ ಟಾಂಗ್ ಕೊಟ್ಟರು.
ಈ ಆರೋಪಗಳು ಹೊಸದೇನಲ್ಲ. ಹಿಂದೆಯು ಮಾಡಿದ್ದರು, ಮುಂದೆಯು ಮಾಡುತ್ತಾರೆ. ನಮ್ಮಕುಟುಂಬದ ಮೇಲೆ ಆರೋಪಗಳನ್ನು ಮಾಡುತ್ತಲೆ ಇರುತ್ತಾರೆ ಎಂದು ಹೇಳಿದರು.
ವಿಜಯೇಂದ್ರ ವಿರುದ್ಧ ಆರೋಪ:ಕೆಪಿಸಿಸಿ ವಕ್ತಾರನ ವಿರುದ್ಧ ಎಫ್‌ಐಆರ್
ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ. ಆದಷ್ಟು ಬೇಗ ಬಿಡುಗಡೆ ಮಾಡಲಿ. ಅಂತ ನಾನು ಕೂಡ ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ ತಲೆಕೆಡಿಸುಕೊಳ್ಳುವುದಿಲ್ಲ. ನನ್ನ ಗುರಿ ಸ್ಪಷ್ಟವಾಗಿದೆ ಎಂದರು.
ಇನ್ನು ಇದೇ ವೇಳೆ ನಟಿ ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ವಿಚಾರಕ್ಕೆ ಮಾತನಾಡಿದ ಅವರು, ನನಗೆ ಚಿತ್ರರಂಗದ ಬಗ್ಗೆ ಸಾಕಷ್ಟು ಗೌರವ ಇದೆ. ಚಿತ್ರನಟರು ಸಾಮಾನ್ಯವಾಗಿ ಎಲ್ಲಾ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ. ಕೆಲ ನಟ ನಟಿಯರು ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ. ಇಲ್ಲಿ ಯಾರೇ ತಪ್ಪು ಮಾಡಿದರು ಅವರ ರಕ್ಷಣೆಯ ಪ್ರಶ್ನೆಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.