ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ?: ಬೊಮ್ಮಾಯಿ ಹೆಸರು ಮುಂಚೂಣಿಯಲ್ಲಿ

By Kannadaprabha News  |  First Published Jul 2, 2023, 3:00 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲು ಒಂದೇ ದಿನ ಬಾಕಿ ಇದ್ದರೂ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದ್ದು, ಭಾನುವಾರ ದೆಹಲಿಯಲ್ಲಿ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.


ಬೆಂಗಳೂರು (ಜು.02): ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲು ಒಂದೇ ದಿನ ಬಾಕಿ ಇದ್ದರೂ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದ್ದು, ಭಾನುವಾರ ದೆಹಲಿಯಲ್ಲಿ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯುಂಟಾಗಿರುವ ಕಾರಣ ಪಕ್ಷದಲ್ಲಿ ಮುಖಂಡರ ನಡೆಯ ಬಗ್ಗೆ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಇದನ್ನು ಶಮನಗೊಳಿಸುವಲ್ಲಿಯೇ ಹರಸಾಹಸ ಮಾಡುತ್ತಿರುವ ವರಿಷ್ಠರು ಚುನಾವಣೆಯ ಫಲಿತಾಂಶ ಬಂದು ತಿಂಗಳು ಕಳೆದರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಒಮ್ಮತ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಸೋಮವಾರದಿಂದ ಅಧಿವೇಶನ ಪ್ರಾರಂಭವಾಗಲಿದೆ. ಈ ವೇಳೆ ಪಕ್ಷದ ಶಾಸಕಾಂಗ ನಾಯಕನ ಆಯ್ಕೆಯು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾಯಕನ ಆಯ್ಕೆಯತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲಾಗಿದೆ.

Tap to resize

Latest Videos

ಯಾವುದೇ ಜವಾಬ್ದಾರಿಯಾದರೂ ಒಕ್ಕಲಿಗರು ಸಮರ್ಥವಾಗಿ ನಿಬಾಯಿಸುವರು: ಶಾಸಕ ಟಿ.ಡಿ.ರಾಜೇಗೌಡ

ಭಾನುವಾರ ದೆಹಲಿಯಲ್ಲಿ ಪಕ್ಷದ ವರಿಷ್ಠರ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ದೆಹಲಿಯಲ್ಲಿಯೇ ಭಾನುವಾರ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆಯಾದರೂ ಒಂದು ವೇಳೆ ಅಲ್ಲಿ ಘೋಷಣೆಯಾಗದಿದ್ದರೆ ಸೋಮವಾರ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಸೋಮವಾರ ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ ಮಾತ್ರ ನಡೆಯಲಿದೆ. ಈ ಕಾರಣಕ್ಕಾಗಿ ಸೋಮವಾರ ಘೋಷಣೆ ಮಾಡುವ ಸಂಭವವೂ ಇದೆ ಎನ್ನಲಾಗಿದೆ.

ಅಭಿಪ್ರಾಯ ಸಂಗ್ರಹ: ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಈಗಾಗಲೇ ರಾಜ್ಯದ ನಾಯಕರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಹಂತದಲ್ಲಿ ಅಭಿಪ್ರಾಯಗಳನ್ನು ಕ್ರೋಢೀಕರಿಸಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಳಿಯೂ ಕೆಲವು ನಾಯಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂ ಹೇಳಲಾಗಿದೆ.

ಸಂಸದ ಮುನಿಸ್ವಾಮಿ ಹೇಳಿಕೆಗೆ ಕಿಮ್ಮತ್ತಿನ ಬೆಲೆ ಇಲ್ಲ: ಶಾಸಕ ನಂಜೇಗೌಡ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಸರು ಶಾಸಕಾಂಗ ಪಕ್ಷದ ನಾಯಕ ಹೆಸರು ಮುಂಚೂಣಿಯಲ್ಲಿದೆ. ಇವರ ಜತೆಗೆ ಮಾಜಿ ಸಚಿವ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸುನೀಲ್‌ಕುಮಾರ್‌, ಅರವಿಂದ ಲಿಂಬಾವಳಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೆಸರು ಸಹ ಕೇಳಿಬಂದಿವೆ. ಯಾರ ಹೆಸರನ್ನು ಅಂತಿಮಗೊಳಿಸಲಾಗುವುದು ಎಂಬುದು ಕುತೂಹಲ ಮೂಡಿಸಿದೆ.

click me!