ಬಜೆಟ್ ಅಧಿವೇಶನಕ್ಕೆ ಆನಂದ್ ಸಿಂಗ್ ಬಂದೇ ಬರ್ತಾರೆ!

Published : Feb 05, 2019, 11:06 PM ISTUpdated : Feb 05, 2019, 11:07 PM IST
ಬಜೆಟ್ ಅಧಿವೇಶನಕ್ಕೆ ಆನಂದ್ ಸಿಂಗ್ ಬಂದೇ ಬರ್ತಾರೆ!

ಸಾರಾಂಶ

ನಾಳೆಯಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಶಾಸಕರಿಂದಲೇ ಹಲ್ಲೆಗೆ ಒಳಗಾಗಿದ್ದ ಶಾಸಕ ಆನಂದ್ ಸಿಂಗ್ ಅಧಿವೇಶನಕ್ಕೆ ಬರುತ್ತಾರೋ ಇಲ್ಲವೋ ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.

ಬೆಂಗಳೂರು[ಫೆ. 05]  ಬಜೆಟ್ ಅಧಿವೇಶನಕ್ಕೆ ಶಾಸಕ‌ ಆನಂದ್ ಸಿಂಗ್‌‌ ಹಾಜರಾಗುವುದು ಖಚಿತವಾಗಿದೆ.  ಅಧಿವೇಶನಕ್ಕೆ ಬರುವುದಾಗಿ ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 10:30 ಸುಮಾರಿಗೆ ಮನೆಯಿಂದ ಹೊರಡಲಿರುವ ಆನಂದ್ ಸಿಂಗ್ ಅಧಿವೇಶನಕ್ಕೆ ಬಂದು ಹಾಜರಾತಿ ಹಾಕಿ ವಾಪಸ್ಸಾಗುವ ಸಾಧ್ಯತೆ ಹೆಚ್ಚಿದೆ. ದೈಹಿಕವಾಗಿ ಆರೋಗ್ಯ ಸಹಕರಿಸಿದರೆ ಕಲಾಪದಲ್ಲಿ ಪಾಲ್ಗೊಳ್ಳುವ ಇಂಗಿತವನ್ನು ಆನಂದ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಕಳೆದ 15 ದಿನಗಳಿಂದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಸಂಜೆ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ