
ಬೆಂಗಳೂರು, [ಫೆ.05]: ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಪರಿಸ್ಥಿತಿ ಉಗುಳಕ್ಕೂ ಆಗದ ನುಂಗಕ್ಕೂ ಆಗದ ಬಿಸಿ ತುಪ್ಪವಾಗಿದೆ.
ಅದೇನೆಂದರೆ ಒಂದು ಕಡೆ ವಿಪ್. ಮತ್ತೊಂದು ಕಡೆ ಬಂಧನ ಭೀತಿ. ಹೌದು... ನಾಳೆಯಿಂದ [ಬುಧವಾರ] ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಈ ನಡುವೆ ಕುಮಾರಸ್ವಾಮಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್ ತನ್ನ ಶಾಸಕರಿಗೆ ಕಡ್ಡಾಯವಾಗಿ ಅಧಿವೇಶನ ಮುಗಿಯುವವರೆಗೂ ಹಾಜರಾಗುವಂತೆ ವಿಪ್ ಜಾರಿ ಮಾಡಿದೆ.
ಒಂದು ವೇಳೆ ಅಧಿವೇಶನಕ್ಕೆ ಗೈರಾದರೆ ಪಕ್ಷ ಕ್ರಮಕೈಗೊಳ್ಳುತ್ತದೆ ಎನ್ನುವ ಭಯ. ಮತ್ತೊಂದೆಡೆ ಅಧಿವೇಶನಕ್ಕೆ ಬಂದರೆ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧನವಾಗುವ ಭೀತಿ.
ಇದ್ರಿಂದ ಸಂಕಷ್ಟದಲ್ಲಿ ಸಿಲುಕಿರುವ ಗಣೇಶ್ಗೆ ಪರಿಸ್ಥಿತಿ ನುಂಗಲಾರದ ತುತ್ತಾಗಿದ್ದು, ಮುಂದಿನ ನಡೆ ಏನು ಅನ್ನೋದು ಮಾತ್ರ ಕುತೂಹಲ ಮೂಡಿಸಿದೆ.
ಅಧಿವೇಶನಕ್ಕೆ ಬರಲಿಲ್ಲ ಅಂದ್ರೆ ಪಕ್ಷ ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಲಿದೆ. ಹೀಗಾಗಿ ನಾಳೆ ಏನು ಮಾಡಬೇಕು ಎಂದು ಗೊತ್ತಾಗದೇ ಜೆ.ಎನ್. ಗಣೇಶ್ ಇಕ್ಕಟ್ಟಿಗೆ ಸಿಲುಕಿದಂತೂ ಸತ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.