ರಾಜ್ಯಪಾಲ ಭಾಷಣದಲ್ಲಿ ಕೇಂದ್ರದ ವಿರುದ್ಧ ಟಾಕ್‌ಫೈಟ್‌, ತೆರಿಗೆ ವಿಚಾರದಲ್ಲಿ ಕರ್ನಾಟಕಕ್ಕೆ ತಾರತಮ್ಯ ಉಲ್ಲೇಖ

By Suvarna News  |  First Published Feb 12, 2024, 12:04 PM IST

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌  ವಿಧಾನಸಭೆಯಲ್ಲಿ  ಭಾಷಣ ಮಾಡಿದ್ದು ತೆರಿಗೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಹೇಳಿದ್ದಾರೆ.


ಬೆಂಗಳೂರು (ಫೆ.12): ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌  ವಿಧಾನಸಭೆಯಲ್ಲಿ  ಭಾಷಣ ಮಾಡಿದ್ದು ತೆರಿಗೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಹೇಳಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಹೊಗಳಿದ್ದಾರೆ.

ತೆರಿಗೆ ಬಗ್ಗೆ ಕೇಂದ್ರಕ್ಕೆ ಟಾಂಗ್‌: ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ.  ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.  ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ.  ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

Tap to resize

Latest Videos

ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ವಿಪ್ ಜಾರಿಗೊಳಿಸಿದ ಬಿಜೆಪಿ, ನಾಳೆ ಮತ್ತೊಂದು ಸರ್ಪ್ರೈಸ್!

ಗ್ಯಾರಂಟಿ ಬಗ್ಗೆ ಹೊಗಳಿಕೆ:  ರಾಜ್ಯಪಾಲರ ಭಾಷಣದಲ್ಲಿ ಐದು ಗ್ಯಾರಂಟಿ ಅನುಷ್ಟಾನದ ಉಲ್ಲೇಖ ಮಾಡಲಾಗಿದ್ದು. ಗ್ಯಾರಂಟಿಯಿಂದ ಆರ್ಥಿಕತೆಗೆ ಉತ್ತೇಜನ ನೀಡಲಾಗಿದೆ. ಎಂಟು ತಿಂಗಳಲ್ಲಿ 77 ಸಾವಿರ ಕೋಟಿ ಬಂಡವಾಳ ರಾಜ್ಯಕ್ಕೆ ಹರಿದು ಬಂದಿದೆ ಎಂದು ಹೇಳಿದ್ದಾರೆ. ನನ್ನ ಸರ್ಕಾರವು ಹೊಸ ಸಂಸ್ಕೃತಿಗೆ ನಾಂದಿ ಹಾಡಿದೆ. ನನ್ನ ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ವಚನಗಳನ್ನು ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ಜನರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಿದೆ ಎಂದು ಹೇಳಲು ಹೆಮ್ಮ ಎನ್ನಿಸುತ್ತದೆ. ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ. ಸಂತಸದ, ನೆಮ್ಮದಿಯ, ಸಂತೃಪ್ತಿಯ ಹೊಸ ಮನ್ವಂತರಕ್ಕೆ ಚಾಲನೆ ದೊರೆತಿದೆ ಎಂದಿದ್ದಾರೆ. 

ಧರ್ಮ, ಜಾತಿ ತಾರತಮ್ಯ: ಇದರ ಜೊತೆಗೆ ನಮ್ಮ ಸಂವಿಧಾನದ ಪ್ರಕಾರ ಚುನಾವಣೆಗಳಲ್ಲಿ ಧರ್ಮ ಜಾತಿ ಇತ್ಯಾದಿಗಳ ಬಳಕೆಗೆ ನಿರ್ಬಂಧಗಳಿವೆ. ನಮ್ಮ ಎಲ್ಲಾ ಕಾರ್ಯಗಳು ಮತ್ತು ಚಟುವಟಿಕೆಗಳು ಸಂವಿಧಾನಕ್ಕೆ ಅನುಗುಣವಾಗಿರುವುದನ್ನ ನಾವು ಖಚಿತಪಡಿಸಿಕೊಳ್ಳಬೇಕು.  ಸಾಂವಿಧಾನಿಕ ಸಂಸ್ಥೆಗಳು ಯಾವುದೇ ಕಾರಣಕ್ಕೂ ದುರ್ಬಲವಾಗದಂತೆ ಅಥವಾ ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಿ ರಕ್ಷಿಸಬೇಕು. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಕರ್ನಾಟಕ ರಾಷ್ಟ್ರದಲ್ಲಿಯೇ ಒಂದು ಮಾದರಿ. ರಾಜ್ಯದಲ್ಲಿ ಜಾರಿಗೆ ತರುವ ಹಲವು ಪ್ರಗತಿಪರ ಯೋಜನೆಗಳು ವಿವಿಧ ರಾಜ್ಯಗಳಿಗೆ ಮಾದರಿಯಾಗಿವೆ ಎನ್ನುವ ಮೂಲ ಧಾರ್ಮಿಕ ವಿಚಾರದಲ್ಲಿ ನಡೆಯುವ ರಾಜಕಾರಣಕ್ಕೆ ಟಾಂಗ್ ಕೊಟ್ಟಿದ್ದಾರೆ.

ಕನ್ನಡ ಕಡ್ಡಾಯ ನಾಮಫಲಕ ಕಾಯ್ದೆ ತರುವ ಕುರಿತು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ:
ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022' ಕಾಯ್ದೆಯನ್ನು ರೂಪಿಸಲಾಗಿದೆ. ಸದ್ಯದಲ್ಲೆ ಅದು ಅನುಷ್ಠಾನಕ್ಕೆ ಬರಲಿದೆ. ಜನರ ಅನುಕೂಲಕ್ಕಾಗಿ ನಾಮಫಲಕಗಳ ಶೇ.60ರಷ್ಟು ಭಾಗವು ಕನ್ನಡದಲ್ಲಿಯೇ ಇರಬೇಕೆಂದು ತೀರ್ಮಾನಿಸಿ ಕಾನೂನು ರೂಪಿಸಿ ಅನುಷ್ಠಾನ ಮಾಡಲು ಕ್ರಮವಹಿಸಿದ್ದೇವೆ ಎಂದು ಹೇಳಿದ್ದಾರೆ.

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ:  31 ಜಿಲ್ಲೆಗಳಿಗೆ 378 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕೇಳಿದ್ದು ಇನ್ನು ಪರಿಹಾರ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಬರ ಹಿನ್ನಲೆ 18172 ಕೋಟಿ ಆರ್ಥಿಕ ನೆರವು ಕೇಳಲಾಗಿದೆ. ಆದ್ರೆ ಇದುವರೆಗೂ ಕೇಂದ್ರದಿಂದ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂದಿದ್ದಾರೆ.

click me!