
ಬೆಂಗಳೂರು (ಅ.18): ಆರ್.ಆರ್.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, ಒಟ್ಟು ನಾಲ್ಕು ನಾಮಪತ್ರಗಳು ತಿರಸ್ಕೃತಗೊಂಡಿವೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದು, ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ಆರ್.ಆರ್.ನಗರ ವಿಧಾನಸಭಾಕ್ಷೇತ್ರದಲ್ಲಿ 23 ಅಭ್ಯರ್ಥಿಗಳು 27 ನಾಮಪತ್ರಗಳನ್ನು ಸಲ್ಲಿಕೆ ಮಾಡಲಾಗಿದ್ದು, ಮೂರು ನಾಮಪತ್ರಗಳು ಅನೂರ್ಜಿತಗೊಂಡಿವೆ.
RR ನಗರ ಉಪಕದನ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್ ಖಂಡಿಸಿ ಕಾಂಗ್ರೆಸ್ ಧರಣಿ ..
ಎಚ್.ಎಂ.ಕಿಶೋರ್ ಗೌಡ, ಶಿವಲಿಂಗಯ್ಯ, ಸಂಪತ್ ಎಂಬುವರ ನಾಮಪತ್ರ ತಿರಸ್ಕಾರಗೊಂಡಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಅ.19 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ನ.3ರಂದು ಮತದಾನ ನಡೆಯಲಿದ್ದು, ನ.10 ರಂದು ಮತ ಎಣಿಕೆ ನಡೆಯಲಿದೆ. ನ.12ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.