ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ 11 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಡಿಸೆಂಬರ್ 5 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದೆ.
ಬೆಂಗಳೂರು [ನ.14]: ರಾಜ್ಯದಲ್ಲಿ ಶಾಸಕರ ಅನರ್ಹತೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ
ಯಲ್ಲಾಪುರ- ಚೈತ್ರಾಗೌಡ
ಎ.ಹಿರೇಕೆರೂರು- ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ
ರಾಣೆಬೆನ್ನೂರು-ಮಲ್ಲಿಕಾರ್ಜುನ ಹಲಗೇರಿ
ವಿಜಯನಗರ- ಎನ್.ಎಂ.ನಬಿ
ಚಿಕ್ಕಬಳ್ಳಾಪುರ-ಕೆ.ಪಿ.ಬಚ್ಚೇಗೌಡ
ಕೆ.ಆರ್.ಪುರಂ- ಸಿ ಕೃಷ್ಣ ಮೂರ್ತಿ
ಯಶವಂತಪುರ-ಟಿ.ಎನ್.ಜವರಾಯಿಗೌಡ
ಶಿವಾಜಿನಗರ-ತನ್ವೀರ್ ಅಹಮ್ಮದ್ ವುಲ್ಲಾ
ಹೊಸಕೋಟೆ- ಪಕ್ಷೇತರ ಅಭ್ಯರ್ಥಿಗೆ ಬೆಂಬಲ
ಕೆ.ಆರ್.ಪೇಟೆ- ದೇವರಾಜ್.ಬಿ.ಎಲ್
ಹುಣಸೂರು- ಸೋಮಶೇಖರ್
ರಾಜ್ಯದಲ್ಲಿ ಒಟ್ಟು 17 ಶಾಸಕರನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಈ ಅನರ್ಹತೆ ಬಳಿಕ ಸುಪ್ರೀಂ ಮೆಟ್ಟಿಲೇರಿದ್ದು, ಇವರೆಲ್ಲರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಅನರ್ಹತೆಯಿಂದ ತೆರವಾದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 11 ರಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ನವೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ