
ಬೆಂಗಳೂರು/ ನವದೆಹಲಿ(ಮಾ. 25) ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್ ಸಿಕ್ಕಿದೆ. ಬಸವಕಲ್ಯಾಣ ಕ್ಷೇತ್ರದಿಂದ ಶರಣು ಸಲಗಾರ್ ಮತ್ತು ಮಸ್ಕಿಯಂಲ್ಲಿ ನಿರೀಕ್ಷೆಯಂತೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಬೆಳಗಾವಿ ಲೋಕಸಭಾ ಟಿಕೆಟ್ ಸಿಗಲಿದೆ ಎಂಬುದನ್ನು ಹೇಳಲಾಗಿತ್ತು. ಮಂಗಳಾ ಅವರಿಗೆ ಟಿಕೆಟ್ ನೀಡಿ ಬಿಜೆಪಿ ಅಚ್ಚರಿ ಮೂಡಿಸಿದೆ. ಸತೀಶ್ ಜಾರಕಿಹೊಳಿ ಪ್ರಬಲ ಅಭ್ಯರ್ಥಿ ಎಂಬ ಕಾರಣಕ್ಕೆ ಮಂಗಳಾ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾತು ಕೇಳಿಬಂದಿದೆ.
ಕಲಾಪ ಮುಗಿದರೂ ಹಾಗೆ ಉಳಿದ ಪ್ರಶ್ನೆಗಳು
ದಿ. ಸುರೇಶ್ ಅಂಗಡಿ ಅವರ ಪುತ್ರಿ, ಹಾಗೂ ಸಚಿವ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಅಂತಿಮವಾಗಿ ಉಪಚುನಾಣೆ ಕಣ ಒಂದು ಹಂತಕ್ಕೆ ಬಂದಿದ್ದು ಆಡಳಿತದಲ್ಲಿರುವ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ.
ಈ ಹಿಂದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.