
ಬೆಂಗಳೂರು(ಡಿ. 09) ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಕೆಲ ಹೊತ್ತಿನಲ್ಲಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಒಂದೂವರೆ ವರ್ಷದಿಂದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಗುಂಡೂರಾವ್ ಸ್ಥಾನ ತೊರೆದಿದ್ದಾರೆ.
"
ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಮೇಲೆ ಗಂಭೀರ ಪರಿಣಾಮ ಉಂಟುಮಾಡಿದೆ. ಕಾಂಗ್ರೆಸ್ ಪದಾಧಿಕಾರಿಗಳೆಲ್ಲ ಒಬ್ಬೊಬ್ಬರಾಗಿ ಸ್ಥಾನ ತ್ಯಾಗ ಮಾಡಿದ್ದಾರೆ. ಉಪಚುನಾವಣೆ ಸೋಲು ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.
ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ರೆ, ಕಾಂಗ್ರೆಸ್ ಕೇವಲ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರ ಹೊಣೆಹೊತ್ತು ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಕಲೆವೇ ಹೊತ್ತಿನಲ್ಲಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.
ಬೈ ಎಲೆಕ್ಷನ್ ರಿಸಲ್ಟ್: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿ
ಇಡೀ ಕಾಂಗ್ರೆಸ್ ಪಾಳಯ ಇದೀಗ ಖಾಲಿ ಖಾಲಿಯಾಗಿದೆ. ದಿನೇಶ್ ಗುಂಡೂರಾವ್ ಅಧಿಕಾರ ವಹಿಸಿಕೊಂಡ ನಂತರ ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲ ಬದಲಾವಣೆ ಆಗಿತ್ತು. ನಿರೀಕ್ಷಿತ ಫಲಿತಾಂಶ ದಾಖಲಿಸಲು ಸಾಧ್ಯವಾಗದ ಕಾರಣ ಇಬ್ಬರು ನಾಯಕರು ಸ್ಥಾನ ತೊರೆದೊದ್ದು ಸೋನಿಯಾ ಗಾಂಧಿ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಡಿಸೆಂಬರ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.