ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು

Published : Oct 08, 2018, 11:18 AM IST
ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು

ಸಾರಾಂಶ

ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   

ಶಿವಮೊಗ್ಗ :  ರಾಜ್ಯದ ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ಬಿಜೆಪಿ ವಿಧಾನ ಸಭಾ ಸದಸ್ಯರು ಮತ್ತು ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಈಗಾಗಲೆ ಒಮ್ಮತದ ಆಯ್ಕೆಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ಮುಖಂಡರು ಆಯ್ಕೆ ಮಾಡಿದ್ದು, ಅವರು ಅ.15ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಭರವಸೆ ಇದೆ ಎಂದರು.

ಸಮೀಕ್ಷೆ ಪ್ರಕಾರ ಈಗಾಗಲೇ ರಾಜ್ಯದಲ್ಲಿ 18 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಆದರೆ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ಪ್ರಧಾನಿ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದು ನಿಶ್ಚಿತ ಎಂದರು.

ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್‌, ಜೆಡಿಎಸ್‌ ಹೊಂದಾಣಿಕೆ ಮಾಡಿದರೂ ನಮ್ಮ ಕಾರ್ಯಕರ್ತರ ಶ್ರಮದಿಂದ ನಾವೇ ಗೆಲ್ಲುತ್ತೇವೆ. ಬಳ್ಳಾರಿಯಲ್ಲೂ ಈಗಾಗಲೇ ಶ್ರೀರಾಮಲು ಜೊತೆಗೆ ಮಾತನಾಡಿದ್ದೇನೆ. ಅಲ್ಲೂ ಬಿಜೆಪಿ ಗೆಲ್ಲಲಿದೆ. ಮಂಡ್ಯದಲ್ಲೂ ಉತ್ತಮ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ದೊಡ್ಡ ಅಂತರದಲ್ಲಿ ಗೆಲ್ಲುವ ಅವಶ್ಯಕತೆ ಇದೆ ಎಂದರು.

ಈ ಚುನಾವಣೆಯ ಫಲಿತಾಂಶ ಮುಂಬರುವ ಲೋಕ ಸಭಾ ಚುನಾವಣೆಗೆ ದಿಕ್‌ಸೂಚಿ ಅಲ್ಲ ಆದರೂ ಉಪ ಚುನಾವಣೆ ನಡೆಯಲಿರುವ 5 ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?