ಕೈಸೋಲಿಗೆ ದಳ ಕಾರಣ; ಇದು ಸಿದ್ದು ಕೊಟ್ಟ 'ಸಪ್ತ' ಲೆಕ್ಕಾಚಾರ!

By Suvarna News  |  First Published Nov 10, 2020, 6:25 PM IST

ಆರ್ ಆರ್ ನಗರ, ಶಿರಾದಲ್ಲಿ ಬಿಜೆಪಿ ಗೆಲುವು/ ಸೋಲಿಗೆ ಕಾರಣ ಹೇಳಿದ ಸಿದ್ದರಾಮಯ್ಯ/ ಬಿಜೆಪಿಯವರು ಹಣದ ಹೊಳೆ ಹರಿಸಿದರು/ ಜೆಡಿಎಸ್ ತನ್ನ ಮತ ಉಳಿಸಿಕೊಂಡಿದಲ್ಲ


ಬೆಂಗಳೂರು(ನ.  10) ಉಪಚುನಾವಣೆ ಫಲಿತಾಂಶ ಹೊರಬಂದಿದೆ.  ಆರ್ ಆರ್ ನಗರ ಮತ್ತು ಶಿರಾದಲ್ಲಿ ಕಮಲ ಅರಳಿದೆ. ಇದೆಲ್ಲದರ ನಡುವೆ  ಕಾಂಗ್ರೆಸ್ ಸೋಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣಗಳನ್ನು ನೀಡಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

Tap to resize

Latest Videos

undefined

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಮತ್ತೆರಡು ಬೈ ಎಲೆಕ್ಷನ್; ವಿಜಯೇಂದ್ರಗೆ ಫುಲ್ ಡಿಮ್ಯಾಂಡ್

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ ಎಂಬುದು ಸಿದ್ದರಾಮಯ್ಯ ಅಭಿಪ್ರಾಯ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ ಎಂಬುದನ್ನು ಉಲ್ಲೇಖಿಸಿದ್ದಾರೆ.

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ ಎಂದು ಸಿದ್ದರಾಮಯ್ಯ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. 

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ. 7/7

— Siddaramaiah (@siddaramaiah)
click me!