ಬಾಗಲಕೋಟೆ, ದಾವಣಗೆರೆ ಶೇ.68.43ರಷ್ಟು ಮತದಾನ: ಟಗರಿನೊಂದಿಗೆ ಬಂದ ಕೈ ಅಭ್ಯರ್ಥಿ, ಹಣ ಹಂಚಿಕೆ ವಿಡಿಯೋ ವೈರಲ್

Kannadaprabha News   | Kannada Prabha
Published : Apr 10, 2026, 07:59 AM IST
Karnataka By-election 2026

ಸಾರಾಂಶ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೇ.68ಕ್ಕೂ ಹೆಚ್ಚು ಮತದಾನವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಟಗರಿನೊಂದಿಗೆ ಬಂದು ಮತ ಚಲಾಯಿಸಿದ್ದು, ಹಣ ಹಂಚಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು (ಏ.10): ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಫಲಿತಾಂಶ ತಿಳಿಯಲು ಹೆಚ್ಚೂ ಕಡಮೆ ಒಂದು ತಿಂಗಳು ಕಾಯಬೇಕಾಗುತ್ತದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಶೇ.68.74 ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ.68.43ರಷ್ಟು ಮಂದಿ ಮತ ಚಲಾಯಿಸಿದ್ದಾರೆ.

ಬಾಗಲಕೋಟೆಯಲ್ಲಿ ಶೇ.68.69ರಷ್ಟು ಪುರುಷರು, ಶೇ.68.68ರಷ್ಟು ಮಹಿಳೆಯರು, ಶೇ.0.07ರಷ್ಟು ತೃತೀಯ ಲಿಂಗಿಗಳು ಮತ ಚಲಾಯಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಶೇ.68.55ರಷ್ಟು ಪುರುಷರು, ಶೇ.68.55ರಷ್ಟು ಮಹಿಳೆಯರು ಹಾಗೂ ಶೇ.0.08ರಷ್ಟು ತೃತೀಯ ಲಿಂಗಿಗಳು ಮತಚಲಾಯಿಸಿದ್ದಾರೆ. ಮೇ 4ರಂದು ಮತಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಮತದಾನಕ್ಕೆ ಟಗರಿನೊಂದಿಗೆ ಬಂದ ಬಾಗಲಕೋಟೆ ಕೈ ಅಭ್ಯರ್ಥಿ ಮೇಟಿ:

ಬಾಗಲಕೋಟೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಗುರುವಾರ ಸ್ವಗ್ರಾಮ ತಿಮ್ಮಾಪುರದಲ್ಲಿ ಮತದಾನ ಮಾಡಿದರು. ಮತದಾನದ ಕೇಂದ್ರದವರೆಗೂ ಟಗರಿಗೆ ಕಾಂಗ್ರೆಸ್ ಪಕ್ಷದ ಧ್ವಜ ಹಾಕಿಕೊಂಡು ಬಂದು ಮತದಾನ ಮಾಡಿದರು. ಮತದಾನಕ್ಕೂ ಮುನ್ನ ತಂದೆ ದಿ.ಎಚ್.ವೈ.ಮೇಟಿ ಅವರ ಸಮಾಧಿಗೆ ತೆರಳಿ ಆಶೀರ್ವಾದ ಪಡೆದು, ಬೆಂಬಲಿಗರೊಂದಿಗೆ ಮತ ಕೇಂದ್ರಕ್ಕೆ ತೆರಳಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಮತದಾನ ಬಳಿಕ ತಂದೆಯನ್ನು ನೆನಸಿಕೊಂಡು ಕಣ್ಣೀರಿಟ್ಟರು. 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಶ ವ್ಯಕ್ತಪಡಿಸಿದರು.

ಮತದಾರರಿಗೆ ಹಣ ಹಂಚಿಕೆಯ ವಿಡಿಯೋ ವೈರಲ್‌:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಿದ ಆರೋಪದಡಿ ಬಾಗಲಕೋಟೆ ನವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಗುರುವಾರ ನಡೆದ ಮತದಾನದ ವೇಳೆ ಕೆಲವರು ಮತದಾರರಿಗೆ ಹಣ ಹಂಚಿಕೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ, ನವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

India latest news live: Supreme Court on temple entry - ಕೆಲವು ಪಂಗಡಗಳಿಗೆ ದೇಗುಲ ಪ್ರವೇಶ ನಿರ್ಬಂಧ ಹಿಂದೂ ಧರ್ಮಕ್ಕೆ ಮಾರಕ - ಸುಪ್ರೀಂ
Priyank Kharge challenges RSS: ವಿಷ ಸರ್ಪಕ್ಕೆ ಹಾಲೆರೆಯಲು ಸಾಧ್ಯವೇ?: ಆರೆಸ್ಸೆಸ್‌ ಪ್ರಿಯಾಂಕ್‌ ಖರ್ಗೆ ಸವಾಲೇನು?