ಆರ್ಥಿಕ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು: ಬೊಮ್ಮಾಯಿ ವಾಗ್ದಾಳಿ

Kannadaprabha News   | Kannada Prabha
Published : Mar 29, 2026, 01:16 PM IST
Karnataka Bypolls Basavaraj bommai slams siddaramaiah government

ಸಾರಾಂಶ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಈ ಭಾಗದ ಜನರಿಗೆ ಅನ್ಯಾಯ ಮಾಡಿದೆ ಹಾಗೂ ಗ್ಯಾರಂಟಿ ಯೋಜನೆಗಳಿಗಾಗಿ ಸಾಲ ಮಾಡಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ

 ಬಾಗಲಕೋಟೆ (ಮಾ.29): ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವ ಅಪಖ್ಯಾತಿ ಸಿದ್ದರಾಮಯ್ಯ ಸರ್ಕಾರಕ್ಕಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಚಾರದಲ್ಲಿ ವಾರ್ಷಿಕ ₹18 ಸಾವಿರ ಕೋಟಿ ನೀಡುವುದಾಗಿ ಹೇಳಿ ಬಜೆಟ್‌ ನಲ್ಲಿ ಕೇವಲ ₹3 ಸಾವಿರ ಕೋಟಿ ಮೀಸಲಿಟ್ಟು, ಈ ಭಾಗದ ಜನರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ. ಇದು ಕ್ಷಮೆಗೆ ಅರ್ಹವಲ್ಲ ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಗೂ ಈಗ ನಡೆಯುತ್ತಿರುವ ಚುನಾವಣೆಗೂ ಬಹಳಷ್ಟು ರಾಜಕೀಯ ಬದಲಾವಣೆ ಆಗಿದೆ. ಸರ್ಕಾರದ ಬಗ್ಗೆ ಜನರ ನಿರೀಕ್ಷೆ ಹುಸಿಯಾಗಿದೆ. ಜನರಿಗೆ ಭ್ರಮನಿರಸನ ಆಗಿದೆ. ಈಗಾಗಲೇ ₹4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇನ್ನು ಮೂರು ಬಜೆಟ್ ಮಂಡಿಸಿದರೆ ಹೊಸದಾಗಿ ₹6-7 ಲಕ್ಷ ಕೋಟಿ ಸಾಲ ರಾಜ್ಯದ ಜನರ ಮೇಲೆ ಹೊರಿಸುತ್ತಾರೆ. ಅದನ್ನು ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.

ಸಿಎಂ ಉದ್ಧಟತನ:

ತಾವು ಕೆಲವು ತಪ್ಪು ಮಾಡಿದ್ದಾರೆ. ಜಲ ಜೀವನ ಮಿಷನ್ ಸರಿಯಾಗಿ ಜಾರಿ ಮಾಡಿಲ್ಲ. ಅನೇಕ ಯೋಜನೆಗಳಿಗೆ ರಾಜ್ಯದ ಪಾಲಿನ ಹಣ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಯುದ್ಧದ ಪರಿಣಾಮವಾಗಿ ಅಬಕಾರಿ ತೆರಿಗೆ ಕಡಿಮೆ ಮಾಡಿದ್ದಾರೆ. ಬೇರೆ ದೇಶಗಳಲ್ಲಿ ಆರ್ಥಿಕ ವ್ಯವಹಾರ ನಿಂತು ಹೋಗಿದೆ. ಭಾರತದಲ್ಲಿ ಯಾವುದೇ ತೊಂದರೆಯಾಗಿಲ್ಲ. ಎಲ್ಲರ ಸಹಕಾರ ಬೇಕು ಎಂದು ಸಿಎಂಗಳ ಸಭೆ ಕರೆದರೆ ಆ ಸಭೆಗೆ ಹೋಗದೇ ಮಂತ್ರಿಗಳನ್ನು ಕಳುಹಿಸಿ ಉದ್ಧಟತನ ಮೆರೆಯುತ್ತಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕೇರಳ ಸಿಎಂ ಹಾಗೂ ಪ್ರತಿಪಕ್ಷಗಳ ಸಿಎಂಗಳು ಪ್ರಧಾನಿ ಸಭೆಗೆ ಹೋಗಿದ್ದಾರೆ. ಸಿದ್ದರಾಮಯ್ಯ ನೀತಿ ಆಯೋಗದ ಸಭೆಗೂ ಹೋಗುವುದಿಲ್ಲ. ರಾಜ್ಯದ ಹಿತ ಕಾಯುವ ಜವಾಬ್ದಾರಿ ಇರುವವರು ತಮ್ಮ ಕರ್ತವ್ಯ ಲೋಪ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹೆಚ್ಚಿನ ಅನುದಾನ

ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ, ಕಾರಜೋಳ ನೀರಾವರಿ ಮಂತ್ರಿಯಾಗಿದ್ದಾಗ ನಾನು ಸಿಎಂ ಆಗಿದ್ದಾಗ ಬಾಗಲಕೋಟೆಗೆ ಹೆಚ್ಚಿನ ಅನುದಾನ ನೀಡಿದ್ದೇವೆ. ಈಗ ಮೇಟಿಯವರ ಕೊನೆಯ ಆಸೆಯಂತೆ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಹೇಳುತ್ತಾರೆ. ಅವರು ಜೀವಂತ ಇದ್ದಾಗ ಯಾಕೆ ಮಾಡಲಿಲ್ಲ. ನಾವಿದ್ದಾಗ ನಾಲ್ಕು ಮೆಡಿಕಲ್ ಕಾಲೇಜು ಮಾಡಿದ್ದೇವು. ಇವರ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಈಗ ಚುನಾವಣೆ ಸಂದರ್ಭದಲ್ಲಿ ದುಡ್ಡು ಬಳಸಿ ಮೆಡಿಕಲ್ ಕಾಲೇಜು ಮಾಡುವುದಾಗಿ ಹೇಳುತ್ತಿದ್ದಾರೆ. 2023 ರ ಚುನಾವಣೆಗೂ 2026ರ ಚುನಾವಣೆಗೆ ಬಹಳ ವ್ಯತ್ಯಾಸ ಇದೆ. ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದೆ. ಅವರು ಹಣ ಚೆಲ್ಲುತ್ತಾರೆ. ಈಗ ರಾಜಶಕ್ತಿ ಪ್ರಜಾಶಕ್ತಿ ನಡುವೆ ಸಂಘರ್ಷ ನಡೆಯುತ್ತಿದೆ. ಇದರಲ್ಲಿ ಪಜಾಶಕ್ತಿ ಗೆಲ್ಲುತ್ತದೆ. ಈ ಚುನಾವಣೆಯನ್ನು ಜನ ಸಾಮಾನ್ಯರು, ನಮ್ಮ ಕಾರ್ಯಕರ್ತರೇ ಮಾಡುತ್ತಾರೆ ಎಂದು ಹೇಳಿದರು.

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಬಸವರಾಜ ಬೊಮ್ಮಾಯಿ ಹಾಗೂ ಎಚ್.ಡಿ. ಕುಮಾರಸ್ವಾಮಿ ತಮ್ಮ ಕ್ಷೇತ್ರದಲ್ಲಿಯೇ ಗೆಲ್ಲಲು ಆಗಲಿಲ್ಲ, ಈ ಉಪ ಚುನಾವಣೆಯಲ್ಲಿ ಹೇಗೆ ಗೆಲ್ಲುತ್ತಾರೆ ಎಂದು ಪಶ್ನಿಸಿದ್ದಾರಲ್ಲ ಎಂದು ಪ್ರಶ್ನೆಗೆ ಸಿಎಂ ಆಗಿಯೇ ಸಿದ್ದರಾಮಯ್ಯ 30 ಸಾವಿರ ಅಂತರದಿಂದ ಸೋತಿದ್ದಾರೆ. ನಾವು ನಾಲೈದು ಬಾರಿ ನಮ್ಮ ಕ್ಷೇತ್ರದಲ್ಲಿ ಗೆದ್ದಿದ್ದೇವೆ. ಬಾದಾಮಿ ಜನ ಅವರ ಕೈ ಹಿಡಿದರು. ಅವರು ಮತ್ತೊಮ್ಮೆ ಬಾದಾಮಿಗೆ ಯಾಕೆ ಬರಲಿಲ್ಲ. ಈ ಸರ್ಕಾರದ ಬಳಿ ಹಣ ಇಲ್ಲ. ನಾವು ಜಮೀನು ವಶಪಡಿಸಿಕೊಳ್ಳುವುದಿಲ್ಲ. ಮುಳುಗಡೆ ಮಾಡಿ ಕೊಡುವುದಿಲ್ಲ ಎಂದು ಹೇಳಿದ್ದರು. ಈಗ ಸ್ಕಿನ್ ಗೇಟ್ ಹಾಕುತ್ತೇವೆ ಎನ್ನುತ್ತಾರೆ. ನೀರು ಹಿಡಿಯದಿದ್ದರೆ ರೈತರಿಗೆ ಏನು ಪ್ರಯೋಜನ. ಇಷ್ಟು ಬಹಿರಂಗವಾಗಿ ಜನರಿಗೆ ದಾರಿ ತಪ್ಪಿಸುವ ಕೆಲಸ ಈ ಸಕಾರ ಮಾಡುತ್ತಿದೆ. ಯುಪಿಎ ಸರ್ಕಾರ ಆರ್ ಆಂಡ್ ಆರ್ ಪಾಲಿಸಿ ಇದೆ. ಅದರ ಪಕಾರ ಇವರು ಕೆಲಸ ಮಾಡಬೇಕು. ಸಂಪೂರ್ಣ ಆರ್. ಆಂಡ್ ಆರ್ ಕೆಲಸ ಮುಗಿಸಿ ಆರು ತಿಂಗಳ ನಂತರ ನೀರು ಹಿಡಿದು ಯೋಜನೆ ಕಾರ್ಯಗತ ಮಾಡಬೇಕೆಂಬ ನಿಯಮವಿದೆ. ಅದನ್ನು ಮಾಡಲು ₹75 ಸಾವಿರ ಕೋಟಿ ಬೇಕು. ಮತ್ತೆ ಇವರು ನ್ಯಾಯ ಒದಗಿಸಿಕೊಡುತ್ತೇವೆ ಎಂದು ಹೇಳುತ್ತಾರೆ ಎಂದು ಹೇಳಿದರ.

ಆಲಮಟ್ಟಿ ಡ್ಯಾಂ ಎತರ ಹೆಚ್ಚಳದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರು ರಾಜ್ಯಗಳ ವ್ಯಾಜ್ಯ ಇದೆ. ಎರಡು ರಾಜ್ಯಗಳ ವಾದ ಮಂಡನೆಯಾಗಿದೆ. ಕೋರ್ಟಲ್ಲಿರುವ ಪ್ರಕ್ರಿಯೆಗೆ ಕರ್ನಾಟಕ ವಕೀರಲು ಏನು ಮಾಡಿದ್ದಾರೆ. ಡ್ಯಾಮ್ ಎತ್ತರ 524 ಮೀಟರ್ ಎತ್ತರ ಮಾಡುವ ಕುರಿತು ಮಹಾರಾಷ್ಟ್ರದವರು ಸುಪ್ರೀಂ ಕೋರ್ಟನಲ್ಲಿ ಅರ್ಜಿ ಹಾಕಿದ್ದರು. ಅದನ್ನು ನಾನು ಸದನದಲ್ಲಿ ಹೇಳಿದಾಗ ಇವರು ಅಫಿಡವಿಟ್ ಹಾಕಿದ್ದಾರೆ ಎಂದು ಹೇಳಿದರು.

ಗ್ಯಾರೆಂಟಿ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರೆಂಟಿ ಯೋಜನೆಗಳು ಸ್ವಂತ ಆರ್ಥಿಕ ಬಲವರ್ಧನೆ ಮಾಡಿ ಎಷ್ಟಾದರೂ ಕೊಡಲಿ, ಎಲ್ಲ ಅಭಿವೃದ್ಧಿ ನಿಲ್ಲಿಸಿ ಸಾಲ ಮಾಡಿ ಯಾವುದೇ ರೀತಿಯ ಅಭಿವೃದ್ಧಿ ಮಾಡದ ಪರಿಸ್ಥಿತಿಗೆ ತಂದರೆ ಯಾವ ಗ್ಯಾರೆಂಟಿ ಬಂದರೇನು ಎಂದು ಪ್ರಶ್ನಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

BJP vs TMC: ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಖಚಿತ, ಟಿಎಂಸಿ ದುರಾಡಳಿತ ಅಂತ್ಯಗೊಳಿಸುತ್ತೇವೆ: ಬಿಜೆಪಿ
ರಾಜ್ಯದಲ್ಲಿ 2028ಕ್ಕೆ ಬಿಜೆಪಿಗೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ ಭವಿಷ್ಯ