
ಬೆಂಗಳೂರು, (ಜ.19): ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಂತೆ ಎರಡು ದಿನದಲ್ಲಿಯೇ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಲಿದೆ.
"
ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್ ನೂತನ ಸಚಿವರಾಗಿದ್ದು, ಇವರಿಗೆ ಖಾತೆ ಕೊಡಬೇಕಿದೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿಎಸ್‌ವೈ
ಈ ಹಿನ್ನೆಲೆಯಲ್ಲಿ ಸಚಿವರುಗಳು ಮಹತ್ವದ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ಅದನ್ನ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಅದರಲ್ಲೂ ಸಿಎಂ ಬಳಿ ಇರುವ ಇಂಧನ ಖಾತೆ ಮೇಲೆ ಹಲವರು ಆಸೆ ಇಟ್ಟುಕೊಂಡು ಕುಳಿತ್ತಿದ್ದಾರೆ.
ಇನ್ನು ಮೂಲಗಳ ಪ್ರಕಾರ ಬಿಎಸ್‌ವೈ ಸಂಪುಟಕ್ಕೆ ಸೇರ್ಪಡೆಯಾದ 7 ನೂತನ ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್ ಆಗಿದ್ದು, ಯಾರಿಗೆ ಯಾವ ಖಾತೆ ಎಂಬುದು ಪಟ್ಟಿ ನಾಳೆ ಅಂದ್ರೆ ಜ.20ರಂದು ಪ್ರಕಟವಾಗಲಿದೆ ಎನ್ನಲಾಗುತ್ತಿದೆ. ಹಾಗಾದ್ರೆ, ಉನ್ನತ ಮೂಲಗಳ ಪ್ರಕಾರ ಯಾರಿಗೆ, ಯಾವ ಖಾತೆ ಸಿಗಲಿದೆ ಎಂಬುದರ ಪಟ್ಟಿ ಈ ಕೆಳಗಿನಂತಿದೆ.
1. ಎಂಟಿಬಿ ನಾಗರಾಜ್ - ಇಂಧನ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
2. ಉಮೇಶ್ ಕತ್ತಿ - ಅಬಕಾರಿ ಇಲಾಖೆ
3. ಅರವಿಂದ ಲಿಂಬಾವಳಿ - ಉನ್ನತ ಶಿಕ್ಷಣ ಅಥವಾ ಬೆಂಗಳೂರು ಅಭಿವೃದ್ಧಿ
4. ಮರುಗೇಶ ನಿರಾಣಿ - ಸಣ್ಣ ಕೈಗಾರಿಕೆ ಇಲಾಖೆ
5. ಆರ್. ಶಂಕರ್ - ಪ್ರವಾಸೋದ್ಯಮ ಇಲಾಖೆ
6. ಸಿ.ಪಿ.ಯೋಗೇಶ್ವರ್ - ಯುವಜನಾ ಸೇವೆ ಮತ್ತು ಕ್ರೀಡೆ, ರೇಷ್ಮೆ ಇಲಾಖೆ
7. ಎಸ್. ಅಂಗಾರ - ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಬಂದರು ಮತ್ತು ಒಳನಾಡು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.