ಇತ್ತ ಸಿಎಂ ನೂತನ ಸಚಿವರ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಮತ್ತೊಂದೆಡೆ ಅಸಮಾಧಾನ ಸ್ಪೋಟವಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಕೆಲವು ಶಾಸಕರು ಬಹಿರಂಗವಾಗಿಯೇ ತಮ್ಮ ಬೇಸರ ತೋಡಿಕೊಂಡಿದ್ದಾರೆ. ಇದರ ಮಧ್ಯೆ ಸಾಹುಕಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ಜ.13): ನೂತನ 7 ಸಚಿವರ ಹೆಸರು ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರಿಂದ ಬಿಎಸ್‌ವೈಗೆ ಸಂಕಷ್ಟ ತಂದಿಟ್ಟಿದೆ.
ಈ ನೂತನ ಸಚಿವರ ಪದಗ್ರಹಣ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ
ಬೆಳಗಾವಿಯಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಏಪ್ರಿಲ್‌ನಲ್ಲಿ ದೊಡ್ಡ ಸಂಪುಟ ಪುನಾರಚನೆ ದೊಡ್ಡ ಮಟ್ಟದಲ್ಲಿ ಆಗುತ್ತೆ ಎಂದು ಅಚ್ಚರಿ ಹೇಳಿಕೆ ಕೊಟ್ಟರು.
ನೂತನ ಸಚಿವರ ಹೆಸರು ಪ್ರಕಟವಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ...!
7 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದಾರೆ. ಆದ್ರೆ ಮಾರ್ಚ್, ಏಪ್ರಿಲ್‌ನಲ್ಲಿ ದೊಡ್ಡ ಸಂಪುಟ ಪುನಾರಚನೆ ಆಗುತ್ತೇ ಆ ವೇಳೆ ಇಂದು ಸಚಿವ ಸ್ಥಾನ ತಪ್ಪಿದವರಿಗೆ ಅಂದು ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಕಲಬುರಗಿಯಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ ಮಾಲೀಕಯ್ಯ ಗುತ್ತೇದಾರಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ಗುತ್ತೆದಾರ ನನಗಿಂತ ಬಲಿಷ್ಠರಾಗಿದ್ದಾರೆ. ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದರು.
ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ. ಎಚ್.ವಿಶ್ವನಾಥ ಸಚಿವರಾಗಲು ಕಾನೂನು ಕಂಟಕವಿದೆ. ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೇಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಬಹಳ ಸಂತೋಷವಾಗಿದೆ. ಮುನಿರತ್ನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಜತೆಗೆ ಎಚ್. ವಿಶ್ವನಾಥ, ಮಹೇಶ ಕುಮಟಳ್ಳಿ, ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.