ಡಿಕೆಶಿ, ಪ್ರಿಯಾಂಕ್ ಖರ್ಗೆ ರೀತಿ ನಮಗೂ ಮಂತ್ರಿ ಪದವಿ ಕೊಡಿ: ಮಂತ್ರಿಗಿರಿಗಾಗಿ ಇಕ್ಬಾಲ್ ಪಟ್ಟು!

Kannadaprabha News   | Kannada Prabha
Published : Mar 22, 2026, 07:39 AM IST
Iqbal Hussain

ಸಾರಾಂಶ

ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರು, ಮೊದಲ ಹಾಗೂ ಎರಡನೇ ಬಾರಿ ಗೆದ್ದ ಸುಮಾರು 55 ಶಾಸಕರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.

ರಾಮನಗರ (ಮಾ.22): ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದವರಿಗೆ ಈ ಬಾರಿಯ ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ನೀಡಲಿ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು. ಹಾಗಾಗಿ, ಈಗಲೂ ಮೊದಲ ಬಾರಿ ಗೆದ್ದವರನ್ನು ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿದ್ದೇವೆ. ಸುಮಾರು 55 ಮಂದಿ ಸೇರಿ, ಒಟ್ಟಿಗೆ ಊಟ ಮಾಡಿ, ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ನಮ್ಮ ಮನವಿಯನ್ನು ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ನಮ್ಮ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಮೂರು-ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಮುಖ್ಯಮಂತ್ರಿಗಳಲ್ಲಿ ಸಚಿವ ಪದವಿಗೆ ಮನವಿ ಮಾಡಿದ್ದಾರೆ. ಹಾಗಾಗಿ, ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡ ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಟಿ ಕಿರಿ ಪುತ್ರ, ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್? ಅಲ್ಪಸಂಖ್ಯಾತರ ವಿರೋಧದ ನಡುವೆ ನಡೆದದ್ದೇನು?
ಮುಸ್ಲಿಮರ ಮನವೊಲಿಸಿದ ಕಾಂಗ್ರೆಸ್‌ ನಾಯಕರು, ದಾವಣಗೆರೆಗೆ ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಬಾಗಲಕೋಟೆ ಟಿಕೆಟ್‌ ಫಿಕ್ಸ್‌!