Priyank kharge: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹರಿಕಾರ ಪ್ರಿಯಾಂಕ್‌ಗೆ ಡಿಸಿಎಂ ಸ್ಥಾನಕ್ಕೆ ಶಾಸಕರ ಒತ್ತಾಯ

Kannadaprabha News   | Kannada Prabha
Published : May 30, 2026, 12:30 PM IST
karnataka cabinet reshuffle MLAs demand Priyank for DCM post

ಸಾರಾಂಶ

ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ಹಲವು ಶಾಸಕರು ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಸಮರ್ಥ ಆಡಳಿತ  ಹಿಂದುಳಿದ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಈ ಬೇಡಿಕೆ ಮುಂದಿಡಲಾಗಿದೆ.

ಬೆಂಗಳೂರು (ಮೇ.30): ಡಿ.ಕೆ.ಶಿವಕುಮಾರ್‌(DK Shivakumar) ಅವರ ನೇತೃತ್ವದಲ್ಲಿ ಶೀಘ್ರದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ(Priyank kharge) ಅವರಿಗೆ ಉಪಮುಖ್ಯಮಂತ್ರಿ ಸ್ಥಾನ(DCM Post) ನೀಡಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಶಾಸಕರು(Kalyan karnataka MLAs) ಹೈಕಮಾಂಡ್‌(Congress highcommand) ನಾಯಕರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅಫಜಲ್ಪುರ ಶಾಸಕ ಎಂ.ವೈ.ಪಾಟೀಲ್‌(MY Patil), ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಸುರಪುರ ಶಾಸಕ ರಾಜ ವೇಣುಗೋಪಾಲ್‌ ನಾಯಕ, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌, ವಿಧಾನ ಪರಿಷತ್‌ ಶಾಸಕ ತಿಪ್ಪಣ್ಣಪ್ಪ ಕಮಕನೂರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತ ನೀಡಿದೆ. ಈಗ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಯಾಗುವ ಯೋಗ ಬಂದಿದೆ. ಶೀಘ್ರದಲ್ಲೇ ಅವರು ಪ್ರಮಾಣವಚನ ಸ್ವೀಕರಿಸಿ ಹೊಸ ಸಚಿವ ಸಂಪುಟ ರಚಿಸಲಿದ್ದಾರೆ.

 ತಮ್ಮ ಸಂಪುಟದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಏಕೆಂದರೆ ಅವರು, ಸಿದ್ದರಾಮಯ್ಯ ಅವರ ಈಗಿನ ಸರ್ಕಾರದಲ್ಲಿ ಹಾಗೂ ಹಿಂದಿನ ಸರ್ಕಾರದಲ್ಲಿ ಅವರಿಗೆ ವಹಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಐಟಿ ಬಿಟಿ ಇಲಾಖೆಗಳನ್ನುಅತ್ಯಂತ ಸಮರ್ಥವಾಗಿ ನಿಭಾಯಿಸಿ ಕೇಂದ್ರ ಸರ್ಕಾರದಿಂದಲೂ ಪ್ರಶಸ್ತಿ, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಅವರು ರಾಜ್ಯದ ಪ್ರಭಾವಿ ನಾಯರಲ್ಲಿ ಒಬ್ಬರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಹರಿಕಾರ. ಬಹಳ ಹಿಂದುಳಿದಿರುವ ಆ ಭಾಗದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರಿಯಾಂಕ್‌ ಖರ್ಗೆ ಅವರನ್ನು ಹೊಸ ಸಂಪುಟದಲ್ಲಿ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಐವರೂ ಶಾಸಕರು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

DK Shivakumar: ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ರಾಮನಗರದಿಂದ 60 ಸಾವಿರ ಜನ ಸೇರಿಸಲು ಸಿದ್ಧತೆ!
ಡಿಕೆಶಿ ಕ್ಯಾಬಿನೆಟ್‌ಗೆ ಹೈಕಮಾಂಡ್ ಟೂ ಸ್ಟೇಜ್ ಫಾರ್ಮುಲಾ: ಜೂನ್ 3ಕ್ಕೆ ಸಿಎಂ ಜೊತೆ 10 ಮಂದಿ ಹಿರಿಯ ಶಾಸಕರಿಗೆ ಮಂತ್ರಿಗಿರಿ!