
ಬೆಂಗಳೂರು (ಜೂ.10): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳುತ್ತಿರುವ ಅವರು, ಬುಧವಾರ ಎಐಸಿಸಿ ಕಚೇರಿ, ಎನ್‌ಎಸ್‌ಯುಐ, ರಾಷ್ಟ್ರೀಯ ಯುವ ಕಾಂಗ್ರೆಸ್ ಕಚೇರಿ ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ.
ಬಳಿಕ ಸಂಜೆ ಕರ್ನಾಟಕ ಭವನದಲ್ಲಿ ಐಎಎಎಸ್ ಅಧಿಕಾರಿಗಳೊಂದಿಗೆ ಡಿನ್ನರ್ ಸಭೆ ನಡೆಸಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸಹ ಜತೆಯಾಗಲಿದ್ದಾರೆ. ಇನ್ನು ಗುರುವಾರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದು, ಒಟ್ಟು ಎರಡು ದಿನ ದೆಹಲಿಯಲ್ಲೇ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.