
ಬೆಂಗಳೂರು(ಮೇ.15): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಕಾಂಗ್ರೆಸ್ ಇದೀಗ ಸಿಎಂ ಯಾರನ್ನು ಮಾಡಬೇಕು ಎಂದು ಹೆಚ್ಚು ತಲೆಕೆಡಿಸಿಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಬ್ಬರನ್ನೂ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿ ತಲುಪಿದ್ದರೆ, ಇತ್ತ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದಾಗಿದೆ. ಹೊಟ್ಟೆಯಲ್ಲಿ ಸಮಸ್ಯೆ ಇದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಮುಖ್ಯಮಂತ್ರಿ ಮಾಡುವುದಾದರೆ ಮಾತ್ರ ದೆಹಲಿಗೆ ಬರುತ್ತೇನೆ ಎಂದು ಸೂಚಿಸಿದ್ದ ಡಿಕೆ ಶಿವಕುಮಾರ್ ಆರೋಗ್ಯದ ಕಾರಣದಿಂದ ಪ್ರವಾಸ ರದ್ದು ಮಾಡಿದ್ದಾರೆ. ಇದರ ಹಿಂದೆ ಮುಖ್ಯಮಂತ್ರಿ ಸ್ಥಾನ ಕೈತಪ್ಪು ಸಾಧ್ಯತೆ ಸೂಚನೆ ಇದೆಯಾ ಅನ್ನೋದು ಚರ್ಚೆಯಾಗುತ್ತಿದೆ. ದೆಹಲಿ ಪ್ರವಾಸ ರದ್ದು ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಮಾರ್ಮಿಕವಾಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಸಿದ್ದು, ಡಿಕೆ ಹೊರಗಿಟ್ಟು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ, ಸಿಎಂ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು!
ಯಾವ ಶಾಸಕರನ್ನೂ ದೆಹಲಿಗೆ ಕರೆದುಕೊಂಡು ಹೋಗಲ್ಲ. ಯಾರ ಬೆಂಬಲವೂ ಬೇಡ. ಆದರೆ ನಾನು ಕರ್ತವ್ಯವನ್ನು ಮಾಡಿದ್ದೇನೆ. ನನ್ನ ಬಳಿ ನಂಬರ್ ಇಲ್ಲ.
ಪಕ್ಷ ಪೂಜೆ ಮಾಡ್ತೀನಿ ವ್ಯಕ್ತಿ ಪೂಜೆ ಮಾಡುವುದಿಲ್ಲ. ಸಿಎಂ ಸ್ಥಾನ ಕೊಡಿ, ಇಲ್ಲದಿದ್ದರೆ, ಬೇಡ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನನ್ನನ್ನ ಬಂಡೆ ಎಂದು ಕರೆದಿದ್ದೀರಿ. ಈ ಬಂಡೆಯನ್ನು ಆಕೃತಿಯನ್ನಾದರೂ ಮಾಡಿ, ವಿಧಾನಸೌಧಕ್ಕೆ ಚಪ್ಪಡಿಯಾದರೂ ಮಾಡಿ, ಗರಡು ಗಂಬವಾದರೂ ಮಾಡಿ. ಒಟ್ಟಿನಲ್ಲಿ ವಿಧಾನಸೌಧಕ್ಕೆ ಚಪ್ಪಡಿ ಮಾಡಿ ಎಂದೇ ಹೇಳಿದ್ದೆ. ನನಗೆ ತಾಳ್ಮೆ, ಸಮಯ ಪ್ರಜ್ಞೆ, ಹೋರಾಟದ ಮನೋಭಾವವಿದೆ ಎಂದಿದ್ದಾರೆ.
ನನ್ನ ಪರಿಶ್ರಮ, ತಂತ್ರಗಳಿಂದ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನನಗೆ ಇಷ್ಟು ಸಾಕು.ಜ್ವರ ಕಾಣಿಸಿಕೊಂಡಿರುವುದರಿಂದ ಹೊಟ್ಟೆಯಲ್ಲಿ ಸಮಸ್ಯೆಯಾಗಿದೆ. ಇತತ್ತ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ದೆಹಲಿ ಪ್ರವಾಸ ರದ್ದು ಮಾಡುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್
ಸಿದ್ದರಾಮಯ್ಯ ಈಗಾಗಲೇ ದೆಹಲಿ ಸೇರಿಕೊಂಡಿದ್ದಾರೆ. ಹಲವು ಆಪ್ತರು ಸಿದ್ದು ಜೊತೆ ಚರ್ಚೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ನಾಳೆ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಇತ್ತ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಸಭೆ ನಡೆಸಿದ್ದಾರೆ.ಕರ್ನಾಟಕ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಉಸ್ತುವಾರಿ ನಾಯಕರ ಅಭಿಪ್ರಾಯ ಕೇಳಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದು ಗೆಲುವು ಸಾಧಿಸಿರುವ ಕಾಂಗ್ರೆಸ್ ಇದೀಗ ಸಿಎಂ ಆಯ್ಕೆಗೆ ಅಷ್ಟೇ ಕಸರತ್ತು ಮಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.