
ಬೆಂಗಳೂರು (ಮೇ 22): ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಪ್ರಮುಖ ಇಲಾಖೆಗಳ ಮುಖ್ಯಸ್ಥರನ್ನು ಬದಲಾಯಿಸಿ ತಮ್ಮ ಆಪ್ತ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಆಡಳಿತಕ್ಕೆ ಬೇಕಾದ ಅಧಿಕಾರಿಗಳ ಸುಸಜ್ಜಿತ ಪಡೆಯನ್ನು ರಚನೆ ಮಾಡಿಕೊಂಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಪ್ರಮುಖ ಹುದ್ದೆಗಳಲ್ಲಿದ್ದ ಅಧಿಕಾರಿಗಳನ್ನು ವಜಾಗೊಳಿಸಿ ಆ ಸ್ಥಾನಗಳಿಗೆ ತಮ್ಮ ಆಪ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ವಿವಿಧ ಸರ್ಕಾರಿ ಇಲಾಖೆಗಳ ಮುಖ್ಯಸ್ಥರ ಹುದ್ದೆಗಳಿಗೆ ತಮಗೆ ಬೇಕಾಗಿದ್ದ ಅಧಿಕಾರಿಗಳನ್ನು ನಿಯೋಜನೆ ಮಾಡಿಕೊಂಡಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿದ್ದ ಬಹುತೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ನಿಗಮ- ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರ ನೇಮಕ ರದ್ದು: 10 ತಿಂಗಳಿಗೆ ಅಧಿಕಾರ ಮುಕ್ತಾಯ
ನೂತನ ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ:
ಎಂಬಿ ಪಾಟೀಲ್ - ವಿಧಾನಸೌಧದ 344,344 A ಕೊಠಡಿಗಳು.
ಜಮೀರ್ ಅಹಮದ್ ಖಾನ್ - ವಿಕಾಸಸೌಧ 143,146 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.
ಕೆ.ಜೆ ಚಾರ್ಜ್ - ವಿಧಾನಸೌಧ 317,317A ಕೊಠಡಿಗಳನ್ನು ಕೊಡಲಾಗಿದೆ.
ದೊಡ್ಡ ಡೀಲಿಂಗ್‌ಮಾಸ್ಟರ್ ಎಂದ ಟ್ರೋಲರ್ಸ್‌ಗೆ ಚಳಿ ಬಿಡಿಸಿದ ಸಂಸದೆ ಸುಮಲತಾ ಅಂಬರೀಶ್
ಡಿಕೆಶಿ ನನ್ನ ದೈವವೆಂದು ಶಾಸಕ ಪ್ರಮಾಣವಚನ: ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕನಾಗಿ ಪ್ರಮಾಣವಚನ ಸ್ವೀಕಾರ ಮಾಡುವ ವೇಳೆ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕಾರ ಮಾಡಿದ್ದಾರೆ. ರಾಜ್ಯದಲ್ಲಿ ಮೇ 24ರಿಂದ ಸರ್ಕಾರ ಕಾರ್ಯಾರಂಭ ಮಾಡಬೇಕಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ 3 ದಿನ ವಿಧಾನಸಭಾ ಅಧಿವೇಶನ ಆರಂಭ ಮಾಡಲಾಗಿದೆ. ಆದರೆ, ಈ ವೇಳೆ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗ ಅವರು ನನ್ನ ಆರಾಧ್ಯ ದೈವ ಡಿ ಕೆ ಶಿವಕುಮಾರ್ ಮೇಲೆ ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆಂದು ಪ್ರತಿಜ್ಞೆ ಸ್ವೀಕಾರ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಚ್ಚೆತ್ತ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ವ್ಯಕ್ತಿಗತ ಹೆಸರಿನಲ್ಲಿ ಪ್ರಮಾಣವಚನ ತೆಗೆದುಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಂತರ ಶಾಸಕ ಬಸವರಾಜ್ ಅವರಿಗೆ ದೇವರ ಹೆಸರಲ್ಲಿ ಪ್ರತಿಜ್ಞೆ ಸ್ವೀಕರಿಸುವಂತೆ ತಾಕೀತು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.