ನನ್ನನ್ನು ಸಿಎಂ ಮಾಡಿದರೆ ಸಿದ್ದರಾಮಯ್ಯನವರ ಸವಾಲುಗಳನ್ನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ.
ನವದೆಹಲಿ (ಮೇ 17): ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದು ಈಗಾಗಲೇ ಮೂರ್ನಾಲ್ಕು ದಿನಗಳಾದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಹೈಕಮಾಂಡ್‌ಗೆ ಸಾಧ್ಯವಾಗಿಲ್ಲ. ಸಿಎಂ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕರೆಸಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದರೂ, ಸಂಧಾನ ಮಾಡಿದರೂ ಯಾವುದೇ ಮಾತುಕತೆ ಸಫಲವಾಗಿಲ್ಲ. ಇಂದು ಮಧ್ಯಾಹ್ನ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ ಡಿ.ಕೆ.ಶಿವಕುಮಾರ್ ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
KARNATAKA GOVT FORMATION: ಕರ್ನಾಟಕ ಸಿಎಂ ಆಯ್ಕೆಯಾಗಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ : ಸುರ್ಜೇವಾಲಾ
ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲಿಸಿಕೊಡ್ತೀನಿ: ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದನ್ನು ಒಪ್ಪಲು ಸಾಧ್ಯವೇ ಇಲ್ಲ. ನಾನು ಮುಖ್ಯಮಂತ್ರಿ ಯಾದರೆ ಸಿದ್ದರಾಮಯ್ಯ ಅವರ ಸವಾಲುಗಳನ್ನು ಎದುರಿಸುತ್ತೇನೆ. ಪಕ್ಷದ ಒಬ್ಬನೇ ಒಬ್ಬ ಶಾಸಕ ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತೇನೆ. ನನ್ನ ಮೇಲಿನ ಕೇಸ್ ಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಇದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರು ರಾಹುಲ್‌ಗಾಂಧಿ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಈ ವೇಳೆಯೂ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರಿಯಾಂಕ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಚರ್ಚೆ ನಡೆಸಲು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ನನಗೆ ಮೊದಲು ಅವಕಾಶ ಕೊಡಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಚರ್ಚೆ ನಡೆಸುತ್ತಿರುವ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಡಿ.ಕೆ. ಶಿವಕುಮಾರ್ ತೀವ್ರವಾಗಿ ಅಸಮಧಾನಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಅಸಮಧಾನ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಸಮಯದಿಂದ ಮಾತುಕತೆ ನಡೆಸಿದ ಬಳಿಕ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಒಪ್ಪಿಕೊಂಡಿದ್ದಾರಂತೆ. ಆದರೆ, ಮುಖ್ಯಮಂತ್ರಿ ಆಗುವ ಅವಕಾಶವನ್ನು ಮೊದಲು ನನಗೆ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರಂತೆ. ಹೈಕಮಾಂಡ್ ಹೇಳಿದಂತೆ ನಾನು ಕೇಳ್ತೀನಿ ಆದರೆ, ಮೊದಲು ಸಿಎಂ ಆಗುವ ಅವಕಾಶ ನನಗೆ ಕೊಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
Karnataka CM Announcement: ಡಿಕೆಶಿ-ಸಿದ್ದು ಸಿಟ್ಟು ಶಮನಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ!
ಪ್ರಿಯಾಂಕಾ ಗಾಂಧಿ ಎಂಟ್ರಿ: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಏರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದ್ದು, ಪಕ್ಷದ ಯಾವ ವರಿಷ್ಠರೂ ಮಾತುಕತೆ ನಡೆಸಿದರೂ ಇಬ್ಬರೂ ನಾಯಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಸಹಿತ ಯಾರು ಮಾತುಕತೆ ನಡೆಸಿದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ಸಿಎಂ ಹುದ್ದೆ ತನಗೇ ಬೇಕೆಂದು ರಚ್ಚೆ ಹಿಡಿದು ಕುಳಿತಿದ್ದಾರೆ. ಇದೀಗ ಈ ಸಮಸ್ಯೆ ಬಗೆಹರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಬ್ಬರ ಜೊತೆಗೆ ಮಾತುಕತೆಗೆ ಪ್ರಿಯಾಂಕ ಗಾಂಧಿ ಒಪ್ಪಿದ್ದಾರೆ. ಉಭಯ ನಾಯಕರ ಜೊತೆಗೆ ಮಾತುಕತೆ ಮಾಡಲು ಪ್ರಿಯಾಂಕಾ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಈ ಬಗ್ಗೆ ಪ್ರಿಯಾಂಕ ತಿಳಿಸಿದ್ದಾರೆ. ಡಿಕೆಶಿ ಮನವೊಲಿಕೆಗೆ ಮುಂದಾಗ್ತಾರಾ ಪ್ರಿಯಾಂಕಾ ಎಂಬುದನ್ನು ಕಾದು ನೋಡಬೇಕಿದೆ.