
ಬೆಂಗಳೂರು: ಇದು ರಾಜ್ಯ ರಾಜಕೀಯದ ಬಹುದೊಡ್ಡ ಸುದ್ದಿ ಕರ್ನಾಟಕ ಸಿಎಂ ಸ್ಥಾನ ಬದಲಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದಾರೆ. ಮನೆಯಲ್ಲೇ ಕೂತು ಡಿಕೆ ಬ್ರದರ್ಸ್ ಮಿಂಚಿನ ಆಟ ಆದರಂಭಿಸಿದ್ದು, ಡಿಕೆ ಬ್ರದರ್ಸ್ ಹೈಕಮಾಂಡ್ ಭೇಟಿ ನಂತ್ರ ಒಕ್ಕಲಿಗ ನಾಯಕರು ಅಖಾಡಕ್ಕಿಳಿದಿದ್ದಾರೆ. ಮಾಗಡಿ ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ಡಿಕೆ ಆಪ್ತರು ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಡಿಕೆಶಿ ಆಪ್ತರು ತೀವ್ರ ಒತ್ತಡ ಹೇರಲು ಮುಂದಾಗಿದ್ದಾರೆ.
ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಕೊಡುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡ ಹೇರಲು ಆನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಎಂಎಲ್ ಸಿ ದಿನೇಶ್ ಗೂಳಿಗೌಡ ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು ಸಂಜೆ ದೆಹಲಿಯಲ್ಲಿ ಎಐಸಿಸಿಎ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಮಾತುಕತೆಗೆ ಮುಂದಾಗಿದ್ದಾರೆ. ಅದಾದ ನಂತರ ನಾಳೆ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ.
ನಾಳೆ ಬೆಳಗ್ಗೆ ಕೆಸಿ ವೇಣುಗೋಪಾಲ್ ಭೇಟಿಗೆ ಸಮಯ ನಿಗದಿಯಾಗಿದೆ. ಸಚಿವ ಚೆಲುವರಾಯಸ್ವಾಮಿ ಕೂಡ ಹೈಕಮಾಂಡ್ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ. ಡಿಕೆಶಿ ಟೀಂ ಮಧ್ಯಾಹ್ನ 3 ಗಂಟೆಗೆ ದೆಹಲಿಗೆ ತೆರಳಿದೆ. ಈ ಮೂಲಕ ಡಿ.ಕೆ ಶಿವಕುಮಾರ್ ಪರ ಆಪ್ತ ನಾಯಕರು ಅಖಾಡಕ್ಕಿಳಿದಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ ಬೆನ್ನಲ್ಲೇ ತೀವ್ರಗೊಂಡ ಪವರ್ ಶೇರಿಂಗ್ ಗದ್ದಲ ಜೋರಾಗಿದೆ.
ಡಿಕೆಶಿವಕುಮಾರ್ ಪರ ಧ್ವನಿ ಎತ್ತಲು ದೆಹಲಿಗೆ ದಂಡಯಾತ್ರೆ ಹೊರಟ ಡಿಕೆಶಿ ಬೆಂಬಲಿಗ ಶಾಸಕರು ಮತ್ತು MLC ಗಳು ಹಳೆ ಮೈಸೂರು ಭಾಗದವರು. ಡಿಕೆಶಿವಕುಮಾರ್ ಪರ ಬ್ಯಾಟಿಂಗ್ ಮಾಡಲು ದೆಹಲಿ ಪ್ರಯಾಣಿಸಿದ್ದು, ನಾಳೆ ಕೆ.ಸಿ.ವೇಣುಗೋಪಾಲ್ ರನ್ನ ಭೇಟಿಯಾಗಲಿದ್ದಾರೆ.
ಇಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ತುಂಬಿದೆ. ಹೀಗಾಗಿ ನವೆಂಬರ್ ಕ್ರಾಂತಿ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಸಭೆಗಳು ಪಕ್ಷದೊಳಗೆ ನಡೆದಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್ ಹಂತಕ್ಕೆ ಬರುವ ಸೂಚನೆ ಇದೆ ಎನ್ನಲಾಗುತ್ತಿದ್ದು, ಸದಾಶಿವನಗರ ನಿವಾಸದಲ್ಲಿ ಕುಳಿತು ಡಿಕೆ ಬ್ರದರ್ಸ್ ಪೊಲಿಟಿಕಲ್ ಗೇಮ್ ಮಾಡುತ್ತಿದ್ದು, ಸುಮಾರು ಒಂದು ಘಂಟೆಯಿಂದ ಡಿಕೆ ಬ್ರದರ್ಸ್ ರಹಸ್ಯ ಚರ್ಚೆ ನಡೆಸಿದ್ದಾರೆ. ಈ ಸಮಯದಲ್ಲಿ ಯಾರಿಗೂ ಭೇಟಿಗೆ ಸಮಯವಕಾಶ ನೀಡದೆ ಸೀಕ್ರೆಟ್ ಮೀಟಿಂಗ್ ನಡೆಸಿದ್ದಾರೆ.
ಇದಕ್ಕೂ ಮುನ್ನ ಹೇಳಿಕೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್ ಕೊಟ್ಟ ಮಾತಿನಂತೆ ನಡೆಯುವವರು ಸಿದ್ದರಾಮಯ್ಯ. ಅವರಿಗೂ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಯಾರಿಗೂ ಕೊಟ್ಟ ಮಾತಿಗೆ ತಪ್ಪಿಲ್ಲ. ಹಿಂದಿನ ಸರ್ಕಾರದಲ್ಲಿ ಕೂಡ ಮಾತಿನ ಪ್ರಕಾರವೇ ನಡೆದಿದ್ದಾರೆ. ಈಗಿನ ಸರ್ಕಾರದಲ್ಲೂ ಕೂಡ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಮುಂದೆಯೂ ಕೊಟ್ಟ ಮಾತಿನ ಪ್ರಕಾರವೇ ನಡೆದುಕೊಳ್ಳುತ್ತಾರೆ. ನನ್ನಣ್ಣನಿಗೆ ಅದೃಷ್ಟ ಇದ್ದರೆ ಸಿಎಂ ಆಗ್ತಾನೆ. ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತದೆ. ನಾನು ಎಲ್ಲ ಮಾತಿಗೂ ಸಾಕ್ಷಿಯೇ, ನಾನು ಕಾಂಗ್ರೆಸ್ ಕಾರ್ಯಕರ್ತ ಎಂದರು.
ಸರ್ಕಾರ ಎರಡುವರೆ ವರ್ಷ ಪೂರೈಕೆ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ಇವತ್ತಿಗೆ ಎರಡುವರೆ ವರ್ಷ ತುಂಬಿದೆ. ನಾವು ಕೊಟ್ಟ ಮಾತಿನಂತೆ ಸಿಎಂ ಗ್ಯಾರಂಟಿಯನ್ನ ಅನುಷ್ಠಾನ ಮಾಡಿದ್ದಾರೆ. ಅವರು ಏನು ಮಾತು ಕೊಟ್ಟಿದ್ದಾರೆ. ಆ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.