
ಸುವರ್ಣ ವಿಧಾನಸೌಧ : ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ಡಿ.14ರ ದೆಹಲಿಯಲ್ಲಿ ಹಮ್ಮಿಕೊಂಡಿರುವ ಮತಗಳ್ಳತನ ವಿರುದ್ಧದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಬಹುತೇಕ ಸಚಿವರು, ಕೆಲ ಶಾಸಕರು ದೆಹಲಿಗೆ ತೆರಳಲಿದ್ದಾರೆ.
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಮ್‌ಲೀಲಾ ಮೈದಾನದಲ್ಲಿ ‘ವೋಟ್ ಚೋರ್ ಗದ್ದಿ ಚೋಡ್’ ಹೆಸರಿನಲ್ಲಿ ಮಹಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸಲು ರಾಜ್ಯದಿಂದ ಬಹುತೇಕ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶನಿವಾರ ಸಂಜೆಯೇ ದೆಹಲಿಗೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಇರುವುದರಿಂದ ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುವ ಸಾಧ್ಯತೆಯಿದೆ. ಮುಖ್ಯಮಂತ್ರಿಗಳ ಜತೆ ಸಚಿವರೂ ಪ್ರಯಾಣಿಸುವ ನಿರೀಕ್ಷೆಯಿದೆ. ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರೊಂದಿಗೆ ಪ್ರತ್ಯೇಕ ಭೇಟಿ ಅವಕಾಶ ಕಡಿಮೆ. ಒಂದು ವೇಳೆ ಭೇಟಿಗೆ ಅವಕಾಶ ಸಿಕ್ಕರೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.