
ನವದೆಹಲಿ(ಮೇ.16): ಕರ್ನಾಟಕ ವಿಧಾನಸಭಾ ಚುನಾವಣಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಾಂಟಾಗಿದೆ. ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ಆರಂಭಿಸಿದ್ದರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಯಾರು ಅನ್ನೋದು ನಿರ್ಧಾರವಾಗಲಿದೆ. ಈ ಸಭೆಗಾಗಿ ದೆಹಲಿ ತಲುಪಿರುವ ಡಿಕೆ ಶಿವಕಕುಮಾರ್ ಇದೀಗ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ. ಇದೇ ವೇಳೆ ಹಲವು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಸಿಎಂ ಸ್ಥಾನ ಸಿಗದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಅನ್ನೋದು ಸುಳ್ಳು. ಈ ರೀತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಸಿಎಂ ಸ್ಥಾನಕ್ಕೆ ಹೈಕಮಾಂಡ್‌ಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಿಎಂ ಆಯ್ಕೆ ಕುರಿತು ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಡಿಕೆ ಶಿವಕುಮಾರ್ ತೆರಳುವ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅನ್ನೋ ಮಾಧ್ಯಮ ವರದಿಯಲ್ಲಿ ಸತ್ಯಾಂಶವಿಲ್ಲ. ಈ ರೀತಿಯ ಸುಳ್ಳು ಹೇಳಿಕೆ ನೀಡಿದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ ಹೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಸೂಚ್ಯವಾಗಿ ತಾನು ಸಿಎಂ ಪ್ರಬಲ ಆಕಾಂಕ್ಷಿಯಾಗಿದ್ದು, ಸ್ಥಾನ ಸಿಗದಿದ್ದರೆ ಕಠಿಣ ನಿರ್ಧಾರ ತೆಗೆದುಕೊಳ್ಳವು ಸಾಧ್ಯತೆಯನ್ನು ಮುಂದಿಟ್ಟಿದ್ದಾರೆ.
Karnataka Govt Formation: ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕೆನ್ನೋ ನಿಯಮವೇನೂ ಇಲ್ಲ
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಈಗಾಗಲೇ ರಾಹುಲ್ ಗಾಂಧಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಕರ್ನಾಟಕ ಚುನಾವಣಾ ಕಾಂಗ್ರೆಸ್ ಉಸ್ತುವಾರಿಗಳು, ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಆಯ್ಕೆ ಕಗ್ಗಾಂಟಾಗುತ್ತಿರುವ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಕೂಡ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಶಾಸಕರ ಪೈಕಿ ಹಲವರು ಮುಖ್ಯಮಂತ್ರಿ ಯಾರು ಅನ್ನೋದು ಹೈಕಮಾಂಡ್ ನಿರ್ಧಾರ ಮಾಡಲಿ ಎಂದಿದ್ದರು. ಇತ್ತ ಪ್ರಜಾಪ್ರಭುತ್ವ ಮಾದರಿಯಲ್ಲಿ ಸಿಎಂ ಆಯ್ಕೆಯಾಗಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರೆ, ಡಿಕೆ ಶಿವಕುಮಾರ್ ತನ್ನ ಪರಿಶ್ರಮಕ್ಕೆ ಪ್ರತಿಫಲ ನೀಡುವಂತೆ ಸೂಚಿಸಿದ್ದಾರೆ. ಇಬ್ಬರು ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ: ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !
ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಹಾಗೂ ಆಪ್ತರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಖಾಸಗಿ ಹೊಟೆಲ್‌ನಲ್ಲಿ ತಂಗಿರುವ ಸಿದ್ದರಾಮಯ್ಯ ಆಪ್ತರ ಜೊತೆ ಸಭೆ ನಡೆಸಿದ್ದಾರೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕೆಲಸ ಮಾಡಿದ್ದಾರೆ. ದೆಹಲಿಯಲ್ಲಿ ಒಗ್ಗಟ್ಟಾಗಿರುವ ಸಿದ್ದು ಆಪ್ತರು ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.